ಪುತ್ತೂರು:ಸಮಾಜ ಸೇವೆಯ ಜತೆಗೆ ವ್ಯವಹಾರಕ್ಕೆ ಪ್ರಾಮುಖ್ಯತೆಯನ್ನು ನೀಡುವ ನಿಟ್ಟಿನಲ್ಲಿ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿರುವ ಸಮೃದ್ದಿ ಸಂಕೀರ್ಣದಲ್ಲಿ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ವತಿಯಿಂದ ಡಿ.23 ರಿಂದ 25ರವರೆಗೆ ರೋಟರಿ ಬಿಸಿನೆಸ್ ಎಕ್ಸ್ಪೋ ನಡೆಯಲಿದೆ ಎಂದು ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಅಧ್ಯಕ್ಷರಾದ ಡಾ. ರಾಜೇಶ್ ಬೆಜ್ಜಂಗಳ ಅವರು ಹೇಳಿದ್ದಾರೆ.
ಇವರು ಪುತ್ತೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದಲ್ಲಿ ಒಂದು ವಸ್ತುವಿನ ಒಂದು ಸ್ಟಾಲ್‌ನಂತೆ 100 ಸ್ಟಾಲ್‌ಗಳು, ಆಹಾರ, ವಾಹನ, ವಿಶೇಷ ಗಿಪ್ಟ್ ಕೂಪನ್‌ಗಳು, ವೈದ್ಯಕೀಯ ಶಿಬಿರ, ಪ್ರತಿದಿನ ಆಕರ್ಷಕ ಬಹುಮಾನಗಳು, ರಕ್ತ ಪರಿಶೋಧನ ಶಿಬಿರ, ವ್ಯವಹಾರ ವಿಚಾರ ಸಂಕಿರಣ, ನೂತನ ಉತ್ಪನ್ನಗಳ ಬಿಡುಗಡೆ, ಮನೋರಂಜನ ಕಾರ್ಯಕ್ರಮಗಳು ನಡೆಯಲಿದೆ.
ಇನ್ನು ಡಿ. 24ರಂದು ಮಧ್ಯಾಹ್ನ 2 ಗಂಟೆಗೆ ಮುಕ್ತವಾಗಿ ಆದರ್ಶ ದಂಪತಿ ಸ್ಪರ್ಧೆ ನಡೆಯಲಿದ್ದು, ಡಿ.15ರ ಮೊದಲು ಆಸಕ್ತರು ನೊಂದಾಯಿಸಿಕೊಳ್ಳಬೇಕು. ಆದರ್ಶ ದಂಪತಿ ಸ್ಪರ್ದೆಯ ದಿನ, ಶಿವಮೊಗ್ಗದಿಂದ ಕಾಮಿಡಿ ಕಿಲಾಡಿ ಖ್ಯಾತಿಯ ಕವಿತಾ ಸುಧೀಂದ್ರ ಭಾಗವಹಿಸಲಿದ್ದಾರೆ ಎಂದು ಮಾಹಿತಿಯನ್ನ ನೀಡಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಸ್ಥಾಪಕಾಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ಪೂರ್ವಾಧ್ಯಕ್ಷರಾದ ರಫೀಕ್ ದರ್ಬೆ, ನವೀನ್ ಚಂದ್ರ ನಾಯಕ್, ಶಿವರಾಮ ಎನ್.ಎಸ್. ಉಪಸ್ಥಿತರಿದ್ರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…