ಉಡುಪಿ:ಚಿಕ್ಕಮಗಳೂರಿನ ಯುವ ವಕೀಲ ಪ್ರೀತಮ್ ಅವರ ಮೇಲೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಮತ್ತು ಇತರ ಪೊಲೀಸರು ನಡೆಸಿದ ಅಮಾನುಷ ಹಲ್ಲೆಯನ್ನು ಖಂಡಿಸಿ, ಉಡುಪಿ ವಕೀಲರ ಸಂಘದಿOದ ಇಂದು ಪ್ರತಿಭಟನೆ ನಡೆಯಿತು.
ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಸಿದ ನ್ಯಾಯವಾದಿಗಳು, ತಪ್ಪಿತಸ್ಥ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಉಡುಪಿ ವಕೀಲರ ಸಂಘದ ಅಧ್ಯಕ್ಷರಾದ ರೆನಾಲ್ಡ್ ಪ್ರವೀಣ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಕೆಲಹೊತ್ತು ನ್ಯಾಯಾಲಯ ಕಲಾಪ ಬಹಿಷ್ಕರಿಸಿ ಅರ್ಧ ತಾಸು ಪ್ರತಿಭಟನೆ ನಡೆಸಿದ್ರು. ಬಳಿಕ ವಕೀಲರ ಸಂಘದ ಅಧ್ಯಕ್ಷರು ಮಾತಾನಾಡಿ, ಪೊಲೀಸರು ಯುವ ನ್ಯಾಯವಾದಿಯ ಮೇಲೆ ಅಮಾನುಷ ಹಲ್ಲೆ ನಡೆಸಿದ್ದಲ್ಲದೆ ಪ್ರತಿಭಟನೆಯನ್ನೂ ನಡೆಸಿದ್ದಾರೆ.
ಈ ರೀತಿ ಪೊಲೀಸರು ಪ್ರತಿಭಟನೆ ನಡೆಸಿದ ಇತಿಹಾಸವೇ ಇಲ್ಲ. ಪ್ರತಿಭಟನೆಯಲ್ಲಿ ಭಾಗಿಯಾದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು. ವಕೀಲರ ರಕ್ಷಣಾ ಕಾಯ್ದೆಯನ್ನು ಶೀಘ್ರವಾಗಿ ಜಾರಿಗೆ ತರಬೇಕು ಅಂತ ಆಗ್ರಹಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…