ಬಂಟ್ವಾಳ:ಸಾಲದ ಬಾದೆಯಿಂದ ಬಳಲುತ್ತಿದ್ದ ಹೋಟೆಲ್ ಕಾರ್ಮಿಕನೋರ್ವ ಚೀಟಿ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಸೋಮನಾಥ ನಿವಾಸಿ ಶೇಖರ ದೇವಾಡಿಗ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಬಂಟ್ವಾಳ ಬಡ್ಡಕಟ್ಟೆ ಎಂಬಲ್ಲಿರುವ ಹೋಟೆಲ್ ಒಂದರಲ್ಲಿ ಕಳೆದ ಐದು ತಿಂಗಳಿನಿOದ ಅಡುಗೆ ಕೆಲಸ ಮಾಡಿಕೊಂಡಿದ್ದ ಈತ ವಾರಕ್ಕೊಮ್ಮೆ ಊರಿಗೆ ಹೋಗಿ ಬರುತಿದ್ರು. ರಾತ್ರಿ ಕೆಲಸ ಮುಗಿಸಿ , ಬಳಿಕ ಹೋಟೆಲ್ ನ ಮಾಲೀಕರ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದರು ಎನ್ನಲಾಗಿದೆ.
ಬೆಳಿಗ್ಗೆ ಕೆಲಸಕ್ಕೆ ಬಾರದ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕ ಕಾರ್ಮಿಕನಿಗೆ ಪೋನ್ ಮಾಡಿದಾಗ ಆತ ರಿಸೀವ್ ಮಾಡದೇ ಇದ್ದುದರಿಂದ ಸಂಶಯಗೊAಡು ವಿಶ್ರಾಂತಿ ಕೊಠಡಿ ಗೆ ತೆರಳಿದಾಗ ಮಲಗಿರುವುದು ಕಂಡು ಎಬ್ಬಿಸಿದ್ದಾರೆ. ಆದರೆ ಆತ ಮಲಗಿರುವ ಪಕ್ಕ ವಿಷದ ಬಾಟಲಿ ಮತ್ತು ಚೀಟಿಯೊಂದಿದ್ದು, ಈತ ವಿಷ ಸೇವಿಸಿರುವ ಬಗ್ಗೆ ಸಂಶಯದಿAದ ಪೋಲೀಸರಿಗೆ ತಿಳಿಸಿದ್ದಾರೆ. ಬಂಟ್ವಾಳ ನಗರ ಠಾಣಾ ಎಸ್.ಐ. ರಾಮಕೃಷ್ಣ ಅವರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…