ಪುತ್ತೂರು:ವಿಕಲಚೇತನರಿಗೆ ಸರಕಾರದ ಹಲವು ಯೋಜನೆಗಳು ಸಹಿತ ವೇತನ, ಪ್ರಯಾಣ ಭತ್ಯೆ ಮುಂತಾದ ಸವಲತ್ತುಗಳು ಸಿಗಬೇಕು ಎಂದು ಒತ್ತಾಯಿಸಿ,
ಡಿ. 7ರಂದು ನಡೆಯುವ ಬೆಳಗಾವಿ ಅಧಿವೇಶನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಿದ್ದು, ಹಕ್ಕೊತ್ತಾಯ ಮಂಡಿಸಲಿದ್ದೇವೆ ಎಂದು ಪುನರ್ ವಸತಿ ಕಾರ್ಯಕರ್ತರ ಜಿಲ್ಲಾ ಅಧ್ಯಕ್ಷ ಜೋನ್ ಬ್ಯಾಪ್ಟಿಸ್ಟ್ ಡಿ’ಸೋಜಾ ಮತ್ತು ಒಕ್ಕೂಟದ ರಾಜ್ಯ ನಿರ್ದೇಶಕ ಪ್ರವೀಣ್ ನಾಯಕ್ ಹೇಳಿದ್ದಾರೆ.
ಪುತ್ತೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ವಿಕಲಚೇತನ ವಿವಿಧೋದ್ದೇಶ ಸಂಘ, ನಗರ ಹಾಗೂ ಗ್ರಾಮೀಣ ಪುನರ್ ವಸತಿ ಕಾರ್ಯಕರ್ತರ ಜಿಲ್ಲಾ ಒಕ್ಕೂಟ ರಾಜ್ಯ ಕಮಿಟಿಯ ನಿರ್ದೇಶನದಂತೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕಳೆದ 15 ವರ್ಷಗಳಿಂದ ವಿಕಲಚೇತನರಾದ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸುತ್ತಾ ಬಂದಿದ್ದರೂ ನಮ್ಮ ಮನವಿಗೆ ಯಾವುದೇ ಸರಕಾರ ಸ್ಪಂದಿಸುತ್ತಿಲ್ಲ. ಸಮಾಜದ ಕಟ್ಟ ಕಡೆಯ ವಿಕಲಚೇತನರು ಕಳೆದ ಹಲವಾರು ವರ್ಷಗಳಿಂದ ವಿಕಲಚೇತನರ ಸರ್ವಾಂಗೀಣ ಅಭಿವೃದ್ಧಿ ನಿಟ್ಟಿನಲ್ಲಿ ಸರಕಾರದ ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡುತ್ತಾ ಬಂದಿದ್ದೇವೆ ಎಂದರು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಖಜಾಂಚಿ ಮುತ್ತಪ್ಪ ಪೆರಾಬೆ, ಸದಸ್ಯೆರಾದ ಸಹನ ಆರ್, ಶರ್ಮಿಳಾ ಉಪಸ್ಥಿತರಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…