ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ಅಗಲಿದ ಗಜರಾಜ ಮೈಸೂರು ದಸರಾದಲ್ಲಿ ಅಂಬಾರಿ ಹೊರುತ್ತಿದ್ದ ಅರ್ಜುನ ಆನೆಗೆ, ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವು ನಗರದ ಮಾರುತಿ ವೀಥಿಕಾದಲ್ಲಿ ನಡೆಯಿತು.
ಮೌನ ಪ್ರಾರ್ಥನೆ ಸಲ್ಲಿಸಿದ ಬಳಿಕ ಅರಣ್ಯ ಅಧಿಕಾರಿಗಳು, ನಾಗರಿಕ ಸಮಿತಿಯ ಕಾರ್ಯಕರ್ತರು, ಪ್ರಾಣಿಪ್ರಿಯರು ಹಾಗು ಸಾರ್ವಜನಿಕರು ಪುಷ್ಪನಮನ ಸಲ್ಲಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಮಾತನಾಡಿದ ನಿತ್ಯಾನಂದ ಒಳಕಾಡು ರವರು, ವಿಶ್ವಪ್ರಸಿದ್ಧ ಮೈಸೂರು ದಸರೆಯಲ್ಲಿ ಎಂಟು ಬಾರಿ ಅಂಬಾರಿ ಹೊತ್ತಿದ್ದ ಗಜರಾಜ ಅರ್ಜುನ ಆನೆಯು, ಸಕಲೇಶಪುರದ ಯಸಳೂರಿನಲ್ಲಿ ಕಾಡನೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಗಾಯಗೊಂಡು, ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ. ಎಲ್ಲರ ಪ್ರೀತಿಗೆ ಪಾತ್ರವಾಗಿದ್ದ ರಾಜ ಗಾಂಭೀರ್ಯ ನಡಿಗೆಯ ಅರ್ಜುನನ ಅಗಲಿಕೆ ಕೋಟ್ಯಾಂತರ ಪ್ರಾಣಿ ಪ್ರೇಮಿಗಳಿಗೆ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ.
ಇನ್ನು ಈ ಸಂದರ್ಭ ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ, ಉಪ ವಲಯ ಅರಣ್ಯಾಧಿಕಾರಿಗಳಾದ ಗುರುರಾಜ್, ಜೀವನದಾಸ್, ಗಸ್ತು ಅರಣ್ಯ ಪಾಲಕರಾದ ಕೇಶವ ಪೂಜಾರಿ, ಚರಣ್ ರಾಜ್, ಮಂಜುನಾಥ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…