ಮಂಗಳೂರು: ಯುಕೊ ಬ್ಯಾಂಕ್‌ನ ಖಾತೆಗಳಲ್ಲಿ 820 ಕೋಟಿ ರೂಪಾಯಿ ಮೌಲ್ಯದ ಐಎಂಪಿಎಸ್ ವ್ಯವಹಾರ ಅಕ್ರಮವಾಗಿ ನಡೆದಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳೂರು ಸೇರಿದಂತೆ 13 ಸ್ಥಳಗಳಲ್ಲಿ ಶೋಧ ನಡೆಸಿದೆ.
ಕೋಲ್ಕತಾ ಮತ್ತು ಮಂಗಳೂರು ಸೇರಿದಂತೆ ಸುಮಾರು 13 ಸ್ಥಳಗಳಲ್ಲಿ ಆರೋಪಿಗಳು ಮತ್ತು ಖಾಸಗಿ ವ್ಯಕ್ತಿ ಗಳು/ಬ್ಯಾಂಕ್ ಅಧಿಕಾರಿಗಳು ಸೇರಿ ದಂತೆ ಸಂಸ್ಥೆ ವಿಚಾರಣೆ, ಶೋಧ ನಡೆಸಿದೆ ಎಂದು ಸಿಬಿಐ ಪ್ರಕಟನೆ ತಿಳಿಸಿದೆ.
ಹುಡುಕಾಟದ ಸಮಯದಲ್ಲಿ, ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗ್ಳು, ಕಂಪ್ಯೂಟರ್ ಸಿಸ್ಟಮ್‌ಗಳು, ಇಮೇಲ್ ಆಕ್ರೈವ್‌ಗಳು ಮತ್ತು ಡೆಬಿಟ್/ಕ್ರೆಡಿಟ್ ಕಾರ್ಡ್‌ಗಳು ಸೇರಿದಂತೆ ಎಲೆಕ್ಟ್ರಾನಿಕ್ ಪುರಾವೆಗಳನ್ನು ಪಡೆಯಲಾಗಿದೆ.
ಯುಕೋ ಬ್ಯಾಂಕ್‌ನಿಂದ ಬಂದ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಲಾಗಿದೆ.
ಈ ಬ್ಯಾಂಕ್‌ನ ಇಬ್ಬರು ಸಹಾಯಕ ಎಂಜಿನಿಯರ್‌ಗಳು ಮತ್ತು ಇತರ ಅಪರಿಚಿತ ವ್ಯಕ್ತಿಗಳ ವಿರುದ್ಧ ಅನುಮಾನಾಸ್ಪದ ತತ್‌ಕ್ಷಣದ ಪಾವತಿ ಸೇವೆ (ಐಎಂಪಿಎಸ್) ವಹಿವಾಟಿನ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ನ. 10 ಹಾಗೂ 13ರ ಮಧ್ಯೆ 820 ಕೋಟಿ ರೂ. ಮೊತ್ತವನ್ನು ಏಳು ಖಾಸಗಿ ಬ್ಯಾಂಕ್‌ಗಳ 14,000 ಖಾತೆದಾರರಿಂದ ಐಎಂಪಿಎಸ್ ಆಂತರಿಕ ವಹಿವಾಟುಗಳ ಮೂಲಕ ಯುಕೋ ಬ್ಯಾಂಕ್‌ನ 41,000 ಖಾತೆದಾರರಿಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಲಾಗಿದೆ.
ಅಚಾನಕ್ ಆಗಿ ಖಾತೆಗೆ ಹಣ ಬಿದ್ದ ಕೂಡಲೇ ಕೆಲವರು ವಿತ್‌ಡ್ರಾ ಕೂಡ ಮಾಡಿಕೊಂಡಿದ್ದಾರೆ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಸಿಬಿಐ ತಿಳಿಸಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…