ಮಂಗಳೂರು: ಸರಳ ಸಜ್ಜನಿಕೆಯ ಧೀಮಂತ ನಾಯಕ, ಬಡವರ ಪಾಲಿನ ಆಶಾಕಿರಣರಾಗಿರುವ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ಅನೇಕ ಜನರ ಕನಸಿಗೆ ಒತ್ತಾಸೆಯಾಗಿ ನಿಂತಿದ್ದಾರೆ.

ಅವರ ಈ ಸಮಾಜಮುಖಿ ಕಾರ್ಯಕ್ಕೆ ಮತ್ತೊಂದು ಗರಿ ಸೇರ್ಪಡೆಯಾಗಿದೆ. ಬಂಟ್ವಾಳದ ಕೊಡ್ಮಣ್ ಗ್ರಾಮದ ನಿವಾಸಿ ಸುಜಾತ ಶೆಟ್ಟಿಯವರ ಮನೆ ಬೀಳುವ ಪರಿಸ್ಥಿತಿಯಲ್ಲಿದ್ದು, ಅವರು ಆರ್ಥಿಕವಾಗಿ ತುಂಬಾ ಕಷ್ಟದಲ್ಲಿದ್ದಾರೆ.
ಇದನ್ನ ಮನಗಂಡ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಸುಜಾತರವರಿಗೆ ಮನೆ ನಿರ್ಮಾಣಕ್ಕೆ ಸಹಾಯ ಧನದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾಂತರಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಒಕ್ಕೂಟದ ಆಹ್ವಾನಿತ ಸದಸ್ಯರಾದ ರವಿರಾಜ್ ಶೆಟ್ಟಿ ಜತ್ತಬೆಟ್ಟು, ಆಡಳಿತಾಧಿಕಾರಿ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್, ಪಲಾನುಭವಿಗಳ ಕುಟುಂಬಸ್ಥರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.



