ಮುಲ್ಕಿ: ಇತಿಹಾಸ ಪ್ರಸಿದ್ಧ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ಶಿಮಂತೂರು ಪರೆಂಕಿಲ ದಿ. ವೇ.ಮೂ. ವಾಸುದೇವ ಭಟ್ ರವರ 30ನೇ ಪುಣ್ಯ ಸಂಸ್ಮರಣೆ ಕಾರ್ಯಕ್ರಮ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಉಡುಪಿ ಅದಮಾರು ಮಠದ ಶ್ರೀ ವಿಶ್ವ ಪ್ರಿಯತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಿದಿ. ವಾಸುದೇವ ಭಟ್ಟರು ಶ್ರಮಜೀವಿಯಾಗಿದ್ದು ಅಪಾರ ದೈವ ಭಕ್ತಿಯನ್ನು ಹೊಂದಿದ್ದರು. ಮಾತು ಹರಿತವಾದರೂ ಜನರಿಗೆ ಹಿತವಾದ ನುಡಿಗಳನ್ನು ನೀಡುತ್ತಾ ಸನ್ಮಾರ್ಗದಲ್ಲಿ ನಡೆಯುವಂತೆ ಪ್ರೇರೇಪಿಸುತ್ತಿದ್ದರು. ದೇವಸ್ಥಾನದ ಅಭಿವೃದ್ಧಿಗೆ ಕಾರಣಕರ್ತರಾಗಿದ್ದರು ಎಂದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ ಎನ್ ಶೆಟ್ಟಿ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಕಟೀಲು ಕ್ಷೇತ್ರದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಹಿರಿಯರ ಆದರ್ಶ ಯುವಕರಿಗೆ ಪ್ರೇರಣೆಯಾಗಿದ್ದು ಮಕ್ಕಳಿಗೆ ಸಂಸ್ಕಾರ ಹಾಗೂ ಸಂಸ್ಕೃತಿ ಕಲಿಸಿಕೊಡುವ ಕೆಲಸವಾಗಬೇಕು ಎಂದರು.ವೇದಿಕೆಯಲ್ಲಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿ, ವೇ. ಮೂ. ಸುಬ್ರಹ್ಮಣ್ಯ ಭಟ್ ತೋಕೂರು, ವಿಠಲ ಭಟ್ ಪರೆಂಕಿಲ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಶ್ರೀಪತಿ ಭಟ್ ಪರೆಂಕಿಲ ರವರನ್ನು ಸ್ವಾಮೀಜಿಯವರು ಕ್ಷೇತ್ರದ ವತಿಯಿಂದ ಗೌರವಿಸಿದರುರಾಜೇಶ್ವರಿ ಭಟ್ ನಿರೂಪಿಸಿದರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…