ದಕ್ಷಿಣ ಕನ್ನಡ : ಧರ್ಮಸ್ಥಳದಲ್ಲಿ 8ರಿಂದ 12ರ ವರೆಗೆ ನಡೆಯಲಿರುವ ಲಕ್ಷದೀಪೋತ್ಸವದ ಮೆರುಗಿನ ತಯಾರಿ ಪೂರ್ಣಗೊಂಡಿದ್ದು, ಭಕ್ತರ ಸ್ವಾಗತಕ್ಕೆ ಅಣಿಯಾಗಿದೆ. ಸರ್ವಧರ್ಮ ಸಮ್ಮೇಳನ, ಸಾಹಿತ್ಯ ಸಮ್ಮೇಳನ, ಇದರೊಂದಿಗೆ ರಾಜ್ಯಮಟ್ಟದ ವಸ್ತುಪ್ರದರ್ಶನ ನೆರವೇರಲಿದೆ.
ದೇವರಿಗೆ ಸ್ವರ್ಣ ಪಲ್ಲಕಿ, ಬೆಳ್ಳಿ ರಥೋತ್ಸವ ವಿಶೇಷ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ, ಶಿವರಾತ್ರಿ ಹಾಗೂ ಕಾಲಾವಧಿ ಜಾತ್ರೆ ನೆರವೇರಲಿದೆ. ನಗರಾಲಂಕಾರದ ಸೊಬಗು ಇರಲಿದೆ. ವಿಶೇಷ ವರ್ಣಾಲಂಕಾರ ನೇತ್ರಾವತಿ ಸ್ನಾನಘಟ್ಟ ದಿಂದ ದೇವಸ್ಥಾನದ ವರೆಗೆ ಕಾಣಬಹುದಾಗಿದೆ. ಅದಲ್ಲದೆ ಪಾರಂಪರಿಕ ಶೈಲಿಯಲ್ಲಿ ಪಥಾಕೆ, ನಿಶಾನೆ, ನಗರಾಲಂಕಾರಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ.
ಲಕ್ಷದೀಪೋತ್ಸವದಲ್ಲಿ ಪ್ರಮುಖ ಆಕರ್ಷಣೆ ರಾಜ್ಯಮಟ್ಟದ ವಸ್ತುಪ್ರದರ್ಶನ, ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರೌಢ ಶಾಲೆಯ ಸಂಪೂರ್ಣ ಆವರಣದಲ್ಲಿ ಸ್ಟಾಲ್‌ಗೆ ಅವಕಾಶ ಮಾಡಿಕೊಡಲಾಗಿದೆ. ಗ್ರಾಮೀಣಾಭಿವೃದ್ಧಿ, ರುಡ್‌ಸೆಟ್, ಸಿರಿ ಉತ್ಪನ್ನ, ವಾಹನ ಪ್ರದರ್ಶನ, ಸಾವಯವ ಕೃಷಿ ಉತ್ಪನ್ನ, ಕರಕುಶಲ ವಸ್ತು, ಯಂತ್ರ ಪರಿಕರ, ಗೃಹೋಪಯೋಗಿ ವಸ್ತುಗಳ ಮಳಿಗೆ ಸಹಿತ ತಿಂಡಿ ತಿನಿಸು ಸೇರಿದಂತೆ ನಾನಾ ಬಗೆಯ ವಸ್ತುಪ್ರದರ್ಶನ ಮಳಿಗೆ ಸಜ್ಜಾಗಿದೆ ಭಕ್ತರಿಗೆ ಮನೋರಂಜನೆಗಾಗಿ ಒಂದೆಡೆ ಮಳಿಗೆಗಳಾದರೆ ರಥಬೀದಿಯಲ್ಲಿ ಸುಮಾರು 1500 ಸಂತೆ ಅಂಗಡಿಗಳು ಇರಲಿವೆ. 2 ಲಕ್ಷಕ್ಕೂ ಅಧಿಕಮಂದಿ ಸೇರುವ ನಿರೀಕ್ಷೆಯಿದೆ. ಈಗಾಗಲೆ ರಾಜ್ಯಾದ್ಯಂತ ಎಲ್ಲೆಡೆ ಸರಕಾರಿ ಹೆಚ್ಚುವರಿ ಬಸ್ ಸೇವೆ, ಭಕ್ತರಿಗೆ ಊಟದ ವ್ಯವಸ್ಥೆ, ಆರೋಗ್ಯ ಸೇವೆ ಸಹಿತ ಸ್ವತ್ಛತೆಗೆ ವಿಶೇಷ ಆಧ್ಯತೆ ನೀಡಲಾಗಿದೆ.
ಡಿ. 10ರಂದು ಅಮೃತವರ್ಷಿಣಿ ಸಭಾಭವನ ದಲ್ಲಿ ಲಲಿತಕಲಾ ಗೋಷ್ಠಿಯಲ್ಲಿ ರಾತ್ರಿ 7ರಿಂದ 10.30ರವರೆಗೆ ಖ್ಯಾತ ಸಂಗೀತ ನಿರ್ದೇಶಕ ಗುರು ಕಿರಣ್ ಅವರಿಂದ ಗಾನ ನೃತ್ಯ ವೈವಿಧ್ಯ- ಗುರುಕಿರಣ್ ನೈಟ್ ಸಂಭ್ರಮ ನಡೆಯಲಿದೆ. ಡಿ.11 ಸರ್ವಧರ್ಮ ಅಧಿವೇಶನವನ್ನು ಖ್ಯಾತ ವಿದ್ವಾಂಸ ಬೆಂಗಳೂರಿನ ಡಾ. ಗುರುರಾಜ ಕರ್ಜಗಿ ಉದ್ಘಾಟಿಸುವರು. ಡಿ.12 ಸಾಹಿತ್ಯ ಸಮ್ಮೇಳನವನ್ನು ಬೆಂಗಳೂರಿನ ಇಸ್ರೋದ ಅಧ್ಯಕ್ಷ ಡಾ| ಎಸ್. ಸೋಮನಾಥ್ ಉದ್ಘಾಟಿಸುವರು.ಇಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…