ಪುತ್ತೂರು:ಇತಿಹಾಸ ಪ್ರಸಿದ್ದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೀಪಾವಳಿಯ ಬಲೀಂದ್ರಪೂಜೆಯoದು ಬಲಿಹೊರಟು, ಶ್ರೀದೇವರ ವರ್ಷದ ಪ್ರಥಮ ಸವಾರಿ ಪೂಕರೆ ಉತ್ಸವವು ವೈಭವದಿಂದ ನಡೆಯಿತು.


ನಂದಿ ಮುಖವಾಡ ಧರಿಸಿದ ‘ಬಸವ’ ದೈವ’ ಶ್ರೀ ದೇವರನ್ನು ಪೂಕರೆ ಕಟ್ಟೆಗೆ ಕರೆದು ಕೊಂಡು ಬರುವುದೇ ವಿಶೇಷ. ವೇ ಮೂ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ವಿಷ್ಣುಪ್ರಸಾದ್ ತಂತ್ರಿ ಮತ್ತು ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು ಮೂಲ ನಾಗ ಸನ್ನಿಧಿಗೆ ತೆರಳಿ, ಪೂಕರೆ ಗದ್ದೆಗೆ ಪ್ರಾರ್ಥನೆ ಮಾಡಿದ್ದಾರೆ. ನಂತರ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು ಅವರು ಮೂಲನಾಗವನದಲ್ಲಿ ಪೂಜೆ ನೆರವೇರಿಸಿದ್ದಾರೆ.
ಜೋಡು ಪೂಕರೆಯನ್ನು ದೇವರಮಾರು ಗದ್ದೆ ಮತ್ತು ಬಾಕಿತಮಾರು ಗದ್ದೆಯಲ್ಲಿ ಇಟ್ಟು ಪ್ರಾರ್ಥನೆ ಮಾಡಿ, ಬಳಿಕ ಪೂಕರೆ ಕಟ್ಟೆಯಲ್ಲಿ ಶ್ರೀದೇವರಿಗೆ ದೀವಟಿಕೆ ಪ್ರಣಾಮ, ಕಟ್ಟೆಪೂಜೆ ನಡೆದು, ಬುಲೆಕಾಣಿಕೆ ಸಂಪ್ರದಾಯದoತೆ ಸೀಮಿತ ಭಕ್ತರಿಗೆ ಸೀಯಾಳ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಶೇಖರ್ ನಾರಾವಿ, ಡಾ. ಸುಧಾ ಎಸ್ ರಾವ್, ರಾಮ್‌ದಾಸ್ ಗೌಡ, ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.



