ಉಡುಪಿ:ದೇಶಾದ್ಯಂತ ಹೃದಯಾಘಾತ ಒಂದೇ ಸಮನೆ ಹೆಚ್ಚುತ್ತಿದ್ದು, ಇದೀಗ ವೈದ್ಯೆಯೊಬ್ಬರು ಚಿಕಿತ್ಸೆ ನೀಡುತ್ತಿರುವ ವೇಳೆಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಈ ದುರಂತ ಘಟನೆ ನಡೆದಿದೆ. ಡಾ. ಶಶಿಕಲಾ ಚಿಕಿತ್ಸೆ ನೀಡುತ್ತಿದ್ದ ವೇಳೆ ಮೃತಪಟ್ಟ ವೈದ್ಯೆಯಾಗಿದ್ದಾರೆ. ಶಶಿಕಲಾ ಅವರು 2022ರ ಫೆಬ್ರವರಿಯಲ್ಲಿ ವಯೋ ನಿವೃತ್ತಿ ಹೊಂದಿದ್ದರು.
ಆದರೆ, ವೈದ್ಯರಿಲ್ಲದ ಹಿನ್ನೆಲೆಯಲ್ಲಿ ಅವರನ್ನು ಹೊರಗುತ್ತಿಗೆಯಲ್ಲಿ ಮುಂದುವರಿಸಲಾಗಿತ್ತು. ಗುರುವಾರ ಅವರು ಜಿಲ್ಲಾಸ್ಪತ್ರೆಯ ಹೊರ ರೋಗಿ ವಿಭಾಗದಲ್ಲಿ ಸೇವೆ ನೀಡುತ್ತಿದ್ದ ವೇಳೆ ಒಮ್ಮೆಗೇ ಕುಸಿದು ಬಿದ್ದಿದ್ದಾರೆ. ರೋಗಿಗೆ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲೇ ಕುಸಿದು ಬಿದ್ದಿದ್ದ ಶಶಿಕಲಾ ಅವರನ್ನು ಕೂಡಲೇ ಜಿಲ್ಲಾಸ್ಪತ್ರೆ ಸಿಬ್ಬಂದಿಗಳು ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿದ್ದಾರೆ. ಆದರೆ ಶಶಿಕಲಾ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಇನ್ನು ಈ ಸಂಬoಧ ಉಡುಪಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.



