ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಇಂದು ಸಂಜೆ ವಿಧಿವಶರಾಗಿದ್ದಾರೆ. ಲೀಲಾವತಿ ಅವರಿಗೆ 85 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲೀಲಾವತಿ ಅವರು ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಲೀಲಾವತಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಕನ್ನಡ, ಮಲಯಾಳಂ ಸೇರಿದಂತೆ ಹಲವಾರು ಭಾಷೆಗಳಲ್ಲಿ ನಟಿಸಿ ಬಹುಭಾಷಾ ನಟಿ ಎಂದು ಗುರುತಿಸಿಕೊಂಡಿದ್ದ ಹಿರಿಯ ನಟಿ ಸಾವಿಗೆ ಚಿತ್ರ ರಂಗ ಕಂಬನಿ ಮಿಡಿದಿದೆ.



