ಉಡುಪಿ: ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ಸಂತೋಷ್ ಎಂಬವರ ಮನೆಯಲ್ಲಿ ಹಾಗೂ ಕಾರಿನ ಡ್ಯಾಶ್ ಬೋರ್ಡ್ ನಲ್ಲಿಟ್ಟಿದ್ದ ಲಕ್ಷಾಂತರ ರೂ. ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಹುನಗುಂದ ತಾಲೂಕಿನ ಪ್ರವೀಣ್ ಕುಮಾರ್ ಜಾಲಪ್ಪ ಹರದೊಳ್ಳ (34) ಎಂದು ಗುರುತಿಸಲಾಗಿದೆ. ಆರೋಪಿ ಹೋಮ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದನು.
ಈತನನ್ನು ಮನೆ ಮಾಲೀಕ ಮಾತಾ ಸೆಲ್ಯೂಷನ್ ಹೋಮ್ ನರ್ಸ್ ಎಂಬ ಸಂಸ್ಥೆಯಿಂದ ಕೆಲಸಕ್ಕೆ ಇಟ್ಟುಕೊಂಡಿದ್ದರು. ಆದರೆ ಪ್ರವೀಣ್ ಕುಮಾರ್ ಡಿ. 4ರಂದು ಸಂಜೆ ಏಕಾಏಕಿಯಾಗಿ ಮನೆಯಿಂದ ಕಾಣೆಯಾಗಿದ್ದನು. ಮನೆಯಲ್ಲಿ ಹಾಗೂ ಕಾರಿನ ಡ್ಯಾಶ್ ಬೋರ್ಡ್ ನಲ್ಲಿಟ್ಟಿದ್ದ 3,45,000 ಲಕ್ಷ ರೂಪಾಯಿಯನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ಮನೆ ಮಾಲೀಕ ಸಂತೋಷ್ ನೀಡಿದ ದೂರಿನಂತೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆಗೆ ಇಳಿದ ಉಡುಪಿ ನಗರ ಪೊಲೀಸರು ಡಿ. 7ರಂದು ಆರೋಪಿ ಪ್ರವೀಣ್ ನನ್ನು ಬಾಗಲಕೋಟೆಯಲ್ಲಿ ವಶಕ್ಕೆ ಪಡೆದು, ಆತನಿಂದ ಕಳವು ಮಾಡಿದ್ದ 3,13,500 ರೂಪಾಯಿಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…