ಮೂಡುಬಿದಿರೆ:ಸಾಮಾನ್ಯ ಮಕ್ಕಳಿಗಿರುವಂತೆ ವಿಶೇಷ ಚೇತನ ಮಕ್ಕಳಿಗೂ ಅವರದ್ದೇ ಆದ ಹಕ್ಕುಗಳಿವೆ. ಸಮಾಜದ ಒಂದು ಭಾಗವಾಗಿರುವ ಅವರ ಬಗ್ಗೆ ವಿಶೇಷವಾದ ಕಾಳಜಿಯನ್ನು ವಹಿಸಿ ಕಾನೂನಿಗೆ ಪೂರಕವಾದ ಸೌಲಭ್ಯಗಳು ಅವರಿಗೆ ಸಿಗುವಂತ್ತಾಗಬೇಕು ಎಂದು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿಜಿ ಹೇಳಿದ್ದಾರೆ.
ಇವರು ಅಂತರಾಷ್ಟ್ರೀಯ ವಿಕಲಚೇತನರ ದಿನಾಚರಣೆಯ ಅಂಗವಾಗಿ ಆದರ್ಶ ಗ್ರಾಮಾಭಿವೃದ್ಧಿ ಮತ್ತು ಸೇವಾ ಸಂಸ್ಥೆ ಮೂಡುಬಿದಿರೆ ಭಿನ್ನ ಸಾಮಥ್ಯ9ವುಳ್ಳವರ ತರಬೇತಿ ಶಾಲೆಗಳು ಮತ್ತು ಸಂಘ ಸಂಸ್ಥೆಗಳ ಆಶ್ರಯದಲ್ಲಿ ಸಮಾಜ ಮಂದಿರದಲ್ಲಿ ನಡೆದ ವಿಶೇಷ ಸಾಮಥ್ಯ9ವುಳ್ಳ ಮಕ್ಕಳು, ಪೋಷಕರು ಹಾಗೂ ಶಿಕ್ಷಕರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ್ರು. ವಿಶೇಷ ಮಕ್ಕಳಲ್ಲಿ ವಿಶೇಷವಾದ ಶಕ್ತಿಯಿದೆ. ಅವರಿಗೂ ಸ್ವಾಭಿಮಾನದಿಂದ ಬದುಕಲು ಸ್ವ ಉದ್ಯೋಗದಂತಹ ಅವಕಾಶವನ್ನು ಕಲ್ಪಿಸಿ ಸಾಮಾನ್ಯರಂತೆ ಬೆಳೆಯಲು ಸಹಕಾರ ನೀಡಬೇಕೆಂದ ಅವರು ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸಲು ಇಂತಹ ಕಾರ್ಯಕ್ರಮಗಳು ಪೂರಕ ಅಂತ ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ದೇವರ ಮಕ್ಕಳು ಕುಣಿದು ಕುಪ್ಪಳಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಪುರಸಭಾ ಮುಖ್ಯಾಧಿಕಾರಿ ಇಂದು ಎಂ, ಮಂಗಳೂರು ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ನ ಅರ್ಜುನ್ ಭಂಡಾರ್ಕರ್ ಸೇರಿದಂತೆ ಹಲವರು ಉಪಸ್ಥಿತರಿದ್ರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…