ಕಾರ್ಕಳ:ಖಾಸಗಿ ಬಸ್ ಹಾಗೂ ಜೀಪ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಿಟ್ಟೆ ಗ್ರಾಮದ ಮಂಜರ್ಪಲ್ಕೆ ಎಂಬಲ್ಲಿ ಇಂದು ನಡೆದಿದೆ.


ಮೃತರನ್ನು ಚಿಕ್ಕಮಗಳೂರು ಜಿಲ್ಲೆಯ ಜಯಪುರ ನಿವಾಸಿ ಶಿವಪ್ಪ ಎಂದು ಗುರುತಿಸಲಾಗಿದೆ. ಮಂಜು , ಸುಜಯ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಕಳದಿಂದ ಪಡುಬಿದ್ರಿ ಮಾರ್ಗವಾಗಿ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ನಂದಳಿಕೆಯಿAದ ಬರುತ್ತಿದ್ದ ಮಹೇಂದ್ರ ಜೀಪ್ ನಡುವೆ ಈ ಅಪಘಾತ ಸಂಭವಿಸಿದೆ.
ಜೀಪ್ ನಲ್ಲಿ ಪ್ರಯಾಣಿಸುತ್ತಿದ್ದವರು ಕಾರ್ಕಳ ತಾಲೂಕಿನ ನಂದಳಿಕೆಯ ತಮ್ಮ ಕುಟುಂಬದ ಮನೆಯ ಕಾರ್ಯಕ್ರಮಕ್ಕಾಗಿ ಚಿಕ್ಕಮಗಳೂರು ಜಿಲ್ಲೆಯ ಜಯಪುರದಿಂದ ಬಂದಿದ್ದು, ಪೂಜೆ ಮುಗಿಸಿ ಮಧ್ಯಾಹ್ನ ಊರಿಗೆ ಹಿಂದಿರುಗುವ ಸಂಧರ್ಭದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಬಸ್ಸಿನಲ್ಲಿದ್ದ 12 ಮಂದಿ ಪ್ರಯಾಣಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾರ್ಕಳದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇನ್ನು ಅಪಘಾತದಲ್ಲಿ ಮೃತರಾದ ಕುಟುಂಬದ ಗುರಿಕಾರ ಶಿವಪ್ಪನವರೇ ಮುಂದೆ ನಿಂತು ದೈವದ ಕೆಲಸದ ನಡೆಸಿಕೊಟ್ಟಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.



