ಬಂಟ್ವಾಳ ತಾಲೂಕಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭ ಇಲ್ಲಿನ ಶಾಲಾ ವಾರ್ಷಿಕೋತ್ಸವ ಹಾಗೂ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ದಿನಾಂಕ 16 -12 – 2023 ನೇ ಶನಿವಾರ ನಡೆಯಲಿರುವುದು.
ಸಾಯಂಕಾಲ ಘಂಟೆ 4 ರಿಂದ ಸ್ಥಳೀಯ ಅಂಗನವಾಡಿ ಪುಟಾಣಿಗಳಿಂದ, ಶಾಲಾ ವಿದ್ಯಾರ್ಥಿಗಳಿಂದ, ಹಿರಿಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ “ಹೆಜ್ಜೆ ಗೆಜ್ಜೆ ನಿನಾದ ” ನಡೆಲಿರುವುದು. ಸಾಯಂಕಾಲ 6:00 ಗಂಟೆಗೆ ಸರಿಯಾಗಿ ಬಂಟ್ವಾಳ ಕ್ಷೇತ್ರದ ಮಾನ್ಯ ಶಾಸಕರಾದ ರಾಜೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು ಈ ಸಂದರ್ಭದಲ್ಲಿ ದಾನಿಗಳಿಂದ ಕೊಡುಗೆಯಾಗಿ ನೀಡಿದ ಕೊಡುಗೆಗಳನ್ನು ಶಾಲೆಗೆ ಹಸ್ತಾಂತರಿಸಲಾಗುವುದು.
ಈ ಕಾರ್ಯಕ್ರಮದಲ್ಲಿ ವೀರಕಂಬ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲಲಿತಾ, ಉಪಾಧ್ಯಕ್ಷ ಜನಾರ್ಧನ ಪೂಜಾರಿ, ಸದಸ್ಯರುಗಳಾದ ದಿನೇಶ್, ನಿಶಾಂತ್ ರೈ, ಜಯಂತಿ, ಗೀತಾ ಜೆ, ಗಾಂಭೀರ್, ಲಕ್ಷ್ಮಿ, ಮೀನಾಕ್ಷಿ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ, ಕ್ಷೇತ್ರ ಸಮನ್ವಯ ಅಧಿಕಾರಿ ರಾಘವೇಂದ್ರ ಬಲ್ಲಾ ಲ್, ಶಾಲಾ ದತ್ತು ಸಂಸ್ಥೆಯ ಮುಖ್ಯಸ್ಥರಾದ ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು, ಟಾಟಾ ಕಂಪನಿಯ ಆಡಳಿತ ವಿಭಾಗದ ಉಪಾಧ್ಯಕ್ಷರಾದ ಸುಧೀರ್ ಸಾಗರ್, ಶಾಲಾ ಸ್ಥಳದಾನಿಗಳಾದ ಎಂ ತಿರುಮಲ ಕುಮಾರ್, ಕಲ್ಲಡ್ಕ ಕ್ಲಸ್ಟರ್ ಸಿ ಆರ್ ಪಿ ಜ್ಯೋತಿ ಡಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ್ ಗೌಡ,ಮೊದಲಾದವರು ಉಪಸ್ಥಿತರಿರುವರು. ಸಭಾ ಕಾರ್ಯಕ್ರಮದ ಬಳಿಕ ಸಂಸ್ಕೃತಿಕ ಕಾರ್ಯಕ್ರಮ ಮುಂದುವರೆಯಲಿದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೊರಗಪ್ಪ ನಾಯ್ಕ್ ತಿಳಿಸಿರುತ್ತಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…