ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಕೊಳ್ನಾಡು ಗ್ರಾಮ ಸಮಿತಿ ಮತ್ತು ಮಂಕುಡೆ ಘಟಸಮಿತಿ ಇದರ ವತಿಯಿಂದ ದ. ಕ. ಜಿ. ಪ. ಉ. ಪ್ರಾ. ಶಾಲೆ ಮಂಕುಡೆ ಇದರ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಶ್ರಮ ಸೇವೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಸಮಿತಿಯ ಅಧ್ಯಕ್ಷರಾದ ಶ್ರೀಧರ್ ಪೂಂಜ, ಸಂಘಟನಾ ಕಾರ್ಯದರ್ಶಿಯಾದ ಪರಮೇಶ್ವರ ಆಚಾರ್ಯ ಮಂಕುಡೆ, ಶ್ರೀ ಮಹಮ್ಮಾಯೀ ಭಜನಾ ಮಂಡಳಿ, ನಾಗವನ – ಕುಂಟ್ರಕಲ ಇದರ ಪ್ರಮುಖರಾದ ಜಯರಾಮ್ ನಾಯ್ಕ್ ಕುಂಟ್ರಕಲ, ಹಳೆ ವಿದ್ಯಾರ್ಥಿ ಯುವಕ ಮಂಡಲ ಮಂಕುಡೆ ಇದರ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ, ಮಂಕುಡೆ ಪ್ರಭಾರ ಮುಖ್ಯ ಶಿಕ್ಷಕರಾದ ಶ್ರೀ ಇಂದುಶೇಖರ ಮತ್ತು ಶಿಕ್ಷಕರ ವೃಂದ, ಘಟಸಮಿತಿಯ ಉಪಾಧ್ಯಕ್ಷರಾದ ಜಗನ್ನಾಥ್ ಶೆಟ್ಟಿ, ಕಾರ್ಯದರ್ಶಿಯಾದ ಉಮೇಶ್ ನಾಯ್ಕ್, ಜೊತೆ ಕಾರ್ಯದರ್ಶಿಯಾದ ಪ್ರೇಮ ಯಸ್. ಪೂಂಜ, ಹಾಗು ಸಂಘಟನಾ ಕಾರ್ಯದರ್ಶಿಯಾದ ಶ್ರಾವ್ಯ ಶೆಟ್ಟಿ ಉಪಸ್ಥಿತರಿದ್ದರು.
ಗ್ರಾಮ ವಿಕಾಸ ಯೋಜನೆಯ ಸಂಯೋಜಕರಾದ ಲೀಲಾ ಕೆ., ಸೇವಾ ದೀಕ್ಷಿತರಾದ ಶ್ವೇತಾ ಶೆಟ್ಟಿ ಮತ್ತು ಕುಮಾರಿ ಅರ್ಪಿತ ಸಹಕರಿಸಿದರು. ವಿಕಾಸವಾಹಿನಿಯ ಸುಮಾರು 55 ಸದಸ್ಯರು ಈ ಶ್ರಮ ಸೇವೆಯಲ್ಲಿ ಭಾಗವಹಿಸಿದರು.
ಶಾಂತಿ ಮಂತ್ರದಿಂದ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…