ಮುಲ್ಕಿ: ಸುಧಾಮ ಫೌಂಡೇಶನ್ ಸಂಯೋಜನೆಯಲ್ಲಿ ನಡೆದ ಕೌಶಲ್ಯಾಭಿವೃದ್ಧಿ ಕಾರ್ಯಗಾರದಲ್ಲಿ ಪರಿಸರ ಸ್ನೇಹಿ ಶಾಪಿಂಗ್ ಬ್ಯಾಗ್ ತಯಾರಿಕಾ ತರಬೇತಿಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಗೆ ಕೌಶಲ್ಯ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಕಾರ್ನಾಡ್ ಲುಲು ಕಾಂಪ್ಲೆಕ್ಸ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ಸುಧಾಮ ಫೌಂಡೇಶನ್ ಮೂಲಕ ರಾಷ್ಟ್ರೀಯತೆ ಉಳಿಸುವುದು, ಏಕತೆ ಬೆಳೆಸುವುದು,ಹಾಗೂ ಮಹಿಳೆಯರನ್ನು ಸಬಲೀಕರಣ ಗೊಳಿಸುವ ಕಾರ್ಯ ಅಭಿನಂದನೀಯ. ಮಹಿಳೆಯರು ತಮ್ಮ ಪ್ರತಿಭೆಯನ್ನು ಸದುಪಯೋಗಪಡಿಸಿ ರಾಷ್ಟ್ರದ ಹಿತಕ್ಕೆ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಧಾಮ ಫೌಂಡೇಶನ್ ಅಧ್ಯಕ್ಷ ಸುನಿಲ್ ಆಳ್ವ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಂಗಳೂರು ಪ್ರಾದೇಶಿಕ ಕಚೇರಿಯ ಉಪ ಪರಿಸರ ಅಧಿಕಾರಿ ಡಾ ಮಹೇಶ್ವರಿ ಸಿಂಗ್ ಮಾತನಾಡಿ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಸ್ವಯಂ ಜಾಗೃತಿ ಮುಖ್ಯ, ಮಹಿಳೆಯರ ಸ್ವಾವಲಂಬನೆ ಹಾಗೂ ಪರಿಸರ ಕಾಳಜಿ ಶ್ಲಾಘನೀಯ ಎಂದರು.
ವೇದಿಕೆಯಲ್ಲಿ ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವ ಪ್ರಸಾದ್ ಪುನರೂರು, ಮುಲ್ಕಿ ಪ್ರೆಸ್ ಕ್ಲಬ್ ಅಧ್ಯಕ್ಷ ನಿಶಾಂತ್ ಶೆಟ್ಟಿ ಕಿಲೆಂಜೂರು, ಫೌಂಡೇಶನ್ ಕಾರ್ಯದರ್ಶಿ ಶೈಲೇಶ್, ಮುಲ್ಕಿ ನ. ಪಂ. ಮಾಜೀ ಅಧ್ಯಕ್ಷ ಸುಭಾಶ್ ಶೆಟ್ಟಿ, ಉಪಾಧ್ಯಕ್ಷ ಸತೀಶ್ ಅಂಚನ್ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ತರಬೇತಿಯಲ್ಲಿ ವಿವಿಧ ಸ್ವಸಹಾಯ ಗುಂಪಿನ ಪ್ರಮುಖರಾದ ರಂಜಿತಾ, ಪೂರ್ಣಿಮಾ, ಸಂಮಿತ್ರ, ರೇಖಾ, ಸೌಮ್ಯ ರವರಿಗೆ ಹಾಗೂ ಭಾಗವಹಿಸಿದ ಅಭ್ಯರ್ಥಿಗಳಿಗೆ ಕೌಶಲ್ಯ ಪ್ರಮಾಣ ಪತ್ರ ವಿತರಿಸಲಾಯಿತು. ತರಬೇತುದಾರ ಶಿಕ್ಷಕಿ ಸನ್ನಿತಾ ಮೋಹನ್ ಕೋಟ್ಯಾನ್ ರವರನ್ನು ಗೌರವಿಸಲಾಯಿತು.
ದಿನೇಶ್ ಕೊಲ್ನಾಡು ನಿರೂಪಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…