ಹೆಸರಾಂತ ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ (59) ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಪ್ರಾಥಮಿಕ ಮೂಲಗಳ ಪ್ರಕಾರ ಕೌಟಂಬಿಕ ಸಮಸ್ಯೆ ಆತ್ಮಹತ್ಯೆಗೆ ಕಾರಣ ಎನ್ನಲಾಗಿದ್ದು ಮಂಗಳವಾರ ರಾತ್ರಿ ತಮ್ಮ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಮ್ಯ ಸ್ವಭಾವದವರಾಗಿದ್ದ ಲೀಲಾಧರ ಶೆಟ್ಟಿಯವರು ಕಾಪುವಿನಲ್ಲಿ ರಂಗ ತರಂಗ ಎಂಬ ನಾಟಕ ಸಂಸ್ಥೆಯನ್ನು ಹುಟ್ಟು ಹಾಕಿದ್ದರು. ಸದಾ ಸಮಾಜಪರ ಕಾಳಜಿ ಹೊಂದಿದ್ದ ಅವರು ಯಾವುದೇ ಕ್ಷಣದಲ್ಲಿ ಕೂಡ ಅಶಕ್ತರ ನೆರವಿಗೆ ಧಾವಿಸುತ್ತಿದ್ದರು. ಆದರೂ ಇತ್ತೀಚೆಗೆ ಹಣಕಾಸಿನ ತೊಂದರೆ ಕೂಡ ಹೊಂದಿದ್ದರು ಎನ್ನಲಾಗಿದೆ. ಮುಂದಿನ ವಾರ ನಡೆಯಬೇಕಾಗಿದ್ದ ಕಬ್ಬಡಿ ಪಂದ್ಯಾಟಕ್ಕೆ ಬೇಕಾದ ಊಟ ಉಪಹಾರ ಶಾಮಿಯಾನ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಲೀಲಾಧರ ಶೆಟ್ಟಿ ಅವರೇ ತಯಾರಿ ಮಾಡಿಟ್ಟಿದ್ದರು. ಇವರ ಅಂತಿಮ ದರ್ಶನ ಇಂದು ಸಂಜೆ ನಾಲ್ಕು ಗಂಟೆಗೆ ಕಾಪು ಮಜೂರು ಕರಂದಾಡಿ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…