ಪುತ್ತೂರು:ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ – ಭಜನಾ ಸತ್ಸಂಗ ರಂಗೋಲಿ , ಹಣತೆ ಬೆಳಕಿನಿಂದ ಕಂಗೊಲಿಸಿದ ದೇವಳದ ರಥಬೀದಿ.
ಪುತ್ತೂರು:ಇತಿಹಾಸ ಪ್ರಸಿದ್ಧ ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವವು ಡಿ.12 ರಂದು ದೇವಳದ ತಂತ್ರಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಸಂಪ್ರದಾಯದoತೆ ಶ್ರೀ ದೇವರ ಉತ್ಸವಗಳೊಂದಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಸಂಯೋಜನೆಯೊAದಿಗೆ ವೈಭವದಿಂದ ನಡೆಯಿತು. ಬೆಳಿಗ್ಗೆ ಲಕ್ಷ ಬಿಲ್ವಾರ್ಚಣೆ, ರಾತ್ರಿ ದೇವಳದ ರಥ ಬೀದಿಯುದ್ದಕ್ಕೂ ಹಣತೆ ಬೆಳಕು ಕಂಗೊಳಿತು. ರಥ ಬೀದಿಯ ಉದ್ದಕ್ಕೂ ರಂಗೋಲಿ. ಅದರ ಮೇಲೆ ಹಣತೆಯ ಬೆಳಕು ಪ್ರಜ್ವಲಿಸುತ್ತಿತ್ತು. ಪಕ್ಕದಲ್ಲಿ ಭಜನಾ ಸತ್ಸಂಗ ಕಾರ್ಯಕ್ರಮ ನಡೆಯಿತು. ದೀಪ ಪ್ರಜ್ವಲನೆ ಬಳಿಕ ಶ್ರೀ ದೇವರ ಬಲಿ ಉತ್ಸವ, ಬಂಡಿ ಉತ್ಸವ, ತೆಪ್ಪೋತ್ಸವ ನಡೆಯಿತು.
ಬೆಳಿಗ್ಗೆ ಲಕ್ಷ ಬಿಲ್ವಾರ್ಚಣೆ ನಡೆದ ಬಳಿಕ ಸಂಜೆ ಪ್ರಮುಖವಾಗಿ ಧಾರ್ಮಿಕ ಶಿಕ್ಷಣ ಯೋಜನೆಯ ವಿದ್ಯಾರ್ಥಿಗಳಿಂದ ಶ್ರೀ ಮಹಾಲಿಂಗೇಶ್ವರ ದೇವರಿಗೆ ದೀಪ ನಮನ ಹಾಗೂ ಧಾರ್ಮಿಕ ಸತ್ಸಂಗವು ಶ್ಲೋಕ, ಭಜನೆ ನಡೆಯಿತು. ಆ ಬಳಿಕ ದೇವದಳ ಗೋಪುರದಲ್ಲಿ ಮಂಗಳೂರು ಕದ್ರಿ ಮಂಜುನಾಥ ದೇವಸ್ಥಾನದ ಭಜನಾ ಮಂಡಳಿಯಿAದ ಭಜನಾ ಕಾರ್ಯಕ್ರಮ ನಡೆಯಿತು.
ಇದೇ ಸಂದರ್ಭದಲ್ಲಿ ದೇವಳದ ರಥ ಬೀದಿಯಲ್ಲಿ ಕಂಗೊಳಿಸಿದ ವರ್ಣರಂಜಿತ ರಂಗೋಲಿಗಳ ಮೇಲೆ ಹಣತೆಯನ್ನು ಇಟ್ಟು ದೀಪ ಪ್ರಜ್ವಲನೆ ನಡೆಯಿತು. ಬ್ರಹ್ಮಶ್ರೀ ವೇ ಮೂ ಗುರು ತಂತ್ರಿಯವರು ರಥ ಬೀದಿಯಲ್ಲಿ ಬಾಳೆದಿಂಡಿನ ಧಳಿಯಲ್ಲಿರಿಸಿದ ಹಣತೆಗೆ ದೀಪ ಪ್ರಜ್ವಲನೆ ಮೂಲಕ ಲಕ್ಷ ದೀಪೋತ್ಸವಕ್ಕೆ ಚಾಲನೆ ನೀಡಿದರು.ರಥ ಬೀದಿಯುದಕ್ಕೂ ಭಕ್ತರು ಹಣತೆ ಬೆಳಗಿಸಿದರು. ಎಣ್ಣೆ ಮತ್ತು ಬತ್ತಿಯನ್ನು ದೇವಳದ ವತಿಯಿಂದ ನೀಡಲಾಗಿತ್ತು. ಕುಂಬಾರರ ಗುಡಿ ಕೈಗಾರಿಕಾ ಸಂಘದಿAದ ಕಡಿಮೆ ದರಲ್ಲಿ ಹಣತೆ ವಿತರಣೆ ನಡೆಯಿತು.ದೇವಳದ ನಿತ್ಯ ಕರಸೇವಕರು ರಥ ಬೀದಿಯಲ್ಲಿ ಹಣತೆ ಬೆಳಗಿಸುವ ಕಾರ್ಯಕ್ಕೆ ಸಹಕಾರ ನೀಡಿದರು. ಪರಿಚಾರಕರು ಸಂಪ್ರದಾಯ ಉತ್ಸವದ ಕಾರ್ಯದಲ್ಲಿ ಭಾಗಿಯಾಗಿದ್ದರು.
ರಾತ್ರಿ ಗಂಟೆ 7:30ಕ್ಕೆ ದೇವರ ಪೂಜೆಯ ಬಳಿಕ ದೇವರ ಉತ್ಸವ ಬಲಿ ಹೊರಟು, ಒಳಾಂಗಣ ಹಾಗೂ ಹೊರಾಂಗಣದಲ್ಲಿ ತಂತ್ರ ಸುತ್ತು, ರಾಜಾಂಗಣದಲ್ಲಿ ಉಡಿಕೆ ಸುತ್ತು, ಚೆಂಡೆ ಸುತ್ತು ನಡೆಯಿತು. ಬಳಿಕ ಖಂಡನಾಯಕನ ಕಟ್ಟೆಯಲ್ಲಿ ಕಟ್ಟೆ ಪೂಜೆಯ ಬಳಿಕ ವಾದ್ಯ, ಭಜನೆ, ಬ್ಯಾಂಡ್, ಸರ್ವವಾದ್ಯ ಸುತ್ತುಗಳು ನಡೆದು ಚಂದ್ರಮAಡಲ ಉತ್ಸವ ಮತ್ತು ತೆಪ್ಪೋತ್ಸವ ನಡೆಯಿತು.
ಇದೆ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶಪ್ರಸಾದ್ ಮುಳಿಯ, ಸದಸ್ಯರಾದ ಶೇಖರ್ ನಾರಾವಿ, ಬಿ.ಐತ್ತಪ್ಪ ನಾಯ್ಕ್, ಡಾ. ಸುಧಾ ಎಸ್.ರಾವ್, ರವೀಂದ್ರನಾಥ ರೈ ಬಳ್ಳಮಜಲು, ರಾಮಚಂದ್ರ ಕಾಮತ್, ರಾಮದಾಸ್ ಗೌಡ, ಬಿ.ಕೆ.ವೀಣಾ,ಮಾಜಿ ಶಾಸಕ ಸಂಜೀವ ಮಠoದೂರು, ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ,ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರು ಮತ್ತು ಪ್ರಧಾನ ಅರ್ಚಕರು ಆಗಿರುವ ವೇ ಮೂ ವಿ.ಎಸ್ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ,ರಾಜೇಶ್ ಬನ್ನೂರು,ಉದ್ಯಮಿ ಸೀತಾರಾಮ ರೈ ಕೆದಂಬಾಡಿಗುತ್ತು ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…