ಉಡುಪಿ:ಗೃಹರಕ್ಷಕ ದಳ ಪೊಲೀಸ್ ಇಲಾಖೆಯ ಹೆಚ್ಚುವರಿ ಶಕ್ತಿ. ತುರ್ತು ಸಂದರ್ಭಗಳಲ್ಲಿ ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಿ, ಸಮಾಜಕ್ಕೆ ಉತ್ತಮ ರೀತಿಯಲ್ಲಿ ಸೇವೆ ಒದಗಿಸುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್ ಹೇಳಿದ್ದಾರೆ.


ಉಡುಪಿ ಜಿಲ್ಲಾ ಗೃಹರಕ್ಷಕ ದಳ ವತಿಯಿಂದ ನಗರದ ಕಚೇರಿ ಆವರಣದಲ್ಲಿ ಆಯೋಜಿಸಿದ ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದ ಅವರು, ಪೊಲೀಸರು ಎಲ್ಲ ಸಂದರ್ಭದಲ್ಲಿ ಎಲ್ಲಾ ಕಡೆಗಳಲ್ಲಿ ಕೆಲಸ ನಿರ್ವಹಿಸಲು ಸಾಧ್ಯವಾಗದಿದ್ದಾಗ, ಗೃಹ ರಕ್ಷಕದಳ ಪೊಲೀಸರೊಂದಿಗೆ ಕೈ ಜೋಡಿಸಿಕೊಂಡು ಬಂದಿದೆ ಎಂದರು.

ಈ ಸಂದರ್ಭದಲ್ಲಿ ಗೃಹರಕ್ಷಕ ದಳ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಕಾಪು ಘಟಕದ ರಾಜೇಂದ್ರ, ಮಣಿಪಾಲ ಘಟಕದ ಮಾಝಿಮ್ ಉಮ್ಮರ್ ಫಾರೂಕ್ ಹಾಗೂ ಸವಿತಾ, ಕುಂದಾಪುರ ಘಟಕದ ಸಂದೀಪ್ ದಾಸ್ ಮತ್ತು ಉಡುಪಿ ಘಟಕದ ಜಯಂತಿ ಅವರನ್ನು ಸನ್ಮಾನಿಸಲಾಯಿತು. ಇನ್ನು ಈ ಸಂದರ್ಭದಲ್ಲಿ ಜಿಲ್ಲಾ ಗೃಹರಕ್ಷಕ ದಳ ಸೆಕೆಂಡ್ ಇನ್ ಕಮಾಂಡೆAಟ್ ಕೆ. ಸಿ. ರಾಜೇಶ್ , ಕಾಪು ದಂಡತೀರ್ಥ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಡಾ. ಪ್ರಶಾಂತ್ ಕುಮಾರ್ ಶೆಟ್ಟಿ, ಡಾ. ವಿಜಯೇಂದ್ರ, ಗೃಹರಕ್ಷಕ ದಳದ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.



