ಉಡುಪಿ:ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರದ ಕೂಪ. ಅಲ್ಲಿ ಮೌಲ್ಯಗಳನ್ನು ಎತ್ತಿ ಹಿಡಿಯುವ ನಾಯಕರೇ ಇಲ್ಲ. ಇಡೀ ದೇಶದ ಸಂಪತ್ತನ್ನು ಲೂಟಿ ಹೊಡೆದಿದ್ದಾರೆ.

ಅದಕ್ಕೆ ರಾಜ್ಯಸಭಾ ಸದಸ್ಯ ಧೀರಜ್ ಸಾಹುವೇ ಜೀವಂತ ಸಾಕ್ಷಿ. ಆತನನ್ನು ಗಲ್ಲಿಗೇರಿಸಬೇಕು ಎಂದು ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ ಹೇಳಿದ್ದಾರೆ. ಇವರು ಜಾರ್ಖಂಡ್‌ನ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರಜ್ ಸಾಹು ಮನೆಯಲ್ಲಿ ಪತ್ತೆಯಾದ 300 ಕೋಟಿ ರೂ. ನಗದು ಹಣ ಹಾಗೂ ಭ್ರಷ್ಟಚಾರವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಡಿಯಾಳಿಯ ಬಿಜೆಪಿ ಕಚೇರಿ ಮುಂಭಾಗದಲ್ಲಿ ಹಮ್ಮಿಕೊಂಡ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಇನ್ನು ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿ.ಪಂ. ಮಾಜಿ ಅಧ್ಯಕ್ಷ ದಿನಕರ ಬಾಬು, ಕೆ. ರಾಘವೇಂದ್ರ ಕಿಣಿ, ಮಹೇಶ್ ಠಾಕೂರ್, ಸದಾನಂದ ಉಪ್ಪಿನಕುದ್ರು, ಗೀತಾಂಜಲಿ ಸುವರ್ಣ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.



