ಕಡಬ:ತಹಶಿಲ್ದಾರ್ ಅವರೇ ನೀವು ಪ್ರಭಾಕರ್ ಆಗದೇ ಕಡಬದಲ್ಲಿ ಟೈಗರ್ ಪ್ರಭಾಕರ್ ಆಗಬೇಕು ಎಂದು ಕಡಬ ತಹಶಿಲ್ದಾರ್ ಅವರಿಗೆ ಮಂಗಳೂರು ಲೋಕಾಯುಕ್ತ ಎಸ್ಪಿ ಅವರು ಎಚ್ಚರಿಕೆ ಕೊಟ್ಟ ಘಟನೆ ನಡೆದಿದೆ.
ಕಡಬದಲ್ಲಿ ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಅಧಿಕಾರಿಗಳಿಂದ ಕಡಬ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಲೋಕಾಯುಕ್ತ ಎಸ್ಪಿ ಸೈಮನ್ ಅವರು ಕಡಬ ತಾಲೂಕು ತಹಶಿಲ್ದಾರ್ ಪ್ರಭಾಕರ್ ಖಜೂರೆ ಅವರಿಗೆ ಈ ರೀತಿ ಹೇಳಿದ್ದಾರೆ.
ಈ ವೇಳೆ ಸಾರ್ವಜನಿಕರಿಂದ ಸುಮಾರು ಐದು ದೂರುಗಳು ಲೋಕಾಯುಕ್ತಕ್ಕೆ ಸಲ್ಲಿಕೆಯಾಗಿದ್ದು, ಇದರಲ್ಲಿ ಕೆಲವು ದೂರುಗಳು ಸ್ಥಳದಲ್ಲಿಯೇ ಇತ್ಯರ್ಥ ಆಗಿದೆ. ಉಳಿದ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ನೋಟೀಸ್ ನೀಡಲಾಗುವುದು ಎಂದು ಲೋಕಾಯುಕ್ತ ಎಸ್ಪಿ ಅವರು ಹೇಳಿದ್ದಾರೆ. ಇದೇ ವೇಳೆ ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ಉಳಿಪ್ಪು ನಿವಾಸಿಯಾದ ಶಿಬು ಎಂಬವರ ಪತ್ನಿ ಸೌಮ್ಯ ಅವರು ಅಕ್ರಮ ಸಕ್ರಮ ಕಡತ ವಿಲೇವಾರಿಯಲ್ಲಿ ಅಧಿಕಾರಿಗಳಿಂದ ಆಗಿರುವ ಅನ್ಯಾಯವನ್ನು ಹೇಳಿ ಗಳಗಳನೆ ಅತ್ತು ಕಣ್ಣೀರಿಟ್ಟ ಪ್ರಸಂಗ ಕೂಡಾ ನಡೆಯಿತು.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್‌ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…