ಉಡುಪಿ: ಉಡುಪಿ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವದ ಪ್ರಯುಕ್ತ ‘ಅಮೃತ ಸಂಗಮ’ ಹಳೆವಿದ್ಯಾರ್ಥಿಗಳ ಸಮಾವೇಶವನ್ನು ಇದೇ ಡಿ.23ರಂದು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಪ್ರಧಾನ ಸಂಘಟಕ ಪ್ರೊ.ಎಂ.ಎಲ್.ಸಾಮಗ ತಿಳಿಸಿದ್ದಾರೆ.
ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಲೇಜು ಸ್ಥಾಪನೆಗೊಂಡ 1949ರಿಂದ ಇದುವರೆಗಿನ ಎಲ್ಲಾ ಹಳೆ ವಿದ್ಯಾರ್ಥಿಗಳು ಒಟ್ಟು ಸೇರಿ ಒಂದು ದಿನದ ಸಂಭ್ರಮ, ಸಡಗರವನ್ನು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲಿದ್ದಾರೆ ಎಂದರು.ಡಿ. 23ರಂದು ಬೆಳಿಗ್ಗೆ 9:30ಕ್ಕೆ ಡಾ.ಟಿಎಂಎ ಪೈ ಪುತ್ಥಳಿಗೆ ಗೌರವಾರ್ಪಣೆಯೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ಬಳಿಕ 10ಗಂಟೆಗೆ ಹಳೆ ವಿದ್ಯಾರ್ಥಿಗಳ ಕಾಲೇಜು ಬದುಕನ್ನು ನೆನಪಿಸುವ ಪೋಟೊ ಗ್ಯಾಲರಿ ಪ್ರದರ್ಶನ ಹಾಗೂ ಅಮೃತ ಸಂಗಮದ ಉದ್ಘಾಟನೆ ನಡೆಯಲಿದೆ. ಸುಮಾರು 5000 ಮಂದಿ ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ. ಮಧ್ಯಾಹ್ನ 2:30ಕ್ಕೆ ಮುದ್ದಣ ಮಂಟಪದಲ್ಲಿ ಹಳೆ ವಿದ್ಯಾರ್ಥಿಗಳ ಅಮೃತ ಸಂಗಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರು, ನಿವೃತ್ತ ಪ್ರಾಧ್ಯಾಪಕರು ಹಾಗೂ ನಿವೃತ್ತ ಶಿಕ್ಷಕೇತರ ಸಿಬ್ಬಂದಿಗಳನ್ನು ಹಾಗೂ 1949ರಿಂದ 1970ರ ಅವಧಿಯಲ್ಲಿ ಕಲಿತ ಹಳೆ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಬಳಿಕ ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ ಎಂದರು.ಈ ಸಂದರ್ಭದಲ್ಲಿ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು.
ಸುದ್ದಿಗೋಷ್ಠಿಗೋಷ್ಠಿಯಲ್ಲಿ ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಷನ್‌ನ ವಿಶ್ವಸ್ಥ ಬಿ.ಪಿ. ವರದರಾಯ ಪ್ರಭು, ಕಾಲೇಜಿನ ಪ್ರಾಂಶುಪಾಲ ಪ್ರೊ.ಲಕ್ಷ್ಮೀನಾರಾಯಣ ಕಾರಂತ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿದೇವಿ, ಎಂಜಿಎಂ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ, ಕಾರ್ಯದರ್ಶಿ ಡಾ.ಎಂ.ವಿಶ್ವನಾಥ ಪೈ, ಕೋಶಾಧಿಕಾರಿ ದೀಪಾಲಿ ಕಾಮತ್ ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…