ಮುಲ್ಕಿ: ಹಳೆಯಂಗಡಿ ಸಮೀಪದ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ, ನಾಗವೃಜ ಕ್ಷೇತ್ರ ಹಾಗೂ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನ ಜಂಟಿಯಾಗಿ ಸಂಪೂರ್ಣ ಶಿಲಾಮಯವಾಗಿ ನವೀಕರಣಗೊಂಡ ತೀರ್ಥ ಕೆರೆಯಲ್ಲಿ ಶಿಲ್ಪಿಗಳಾದ ವೆಂಕಟೇಶ್ ಅವರಿಂದ ವಿಶ್ವಕರ್ಮ ಪೂಜೆ ಹಾಗೂ ತತ್ಸಂಬಂಧಿ ಧಾರ್ಮಿಕ ವಿಧಿಗಳು ನಡೆಯಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.












