ಮೂಡುಬಿದಿರೆ: ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಆಲಂಗಾರು ವಲಯದ ನೂತನ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರವು ಗುರುವಾರ ಬನ್ನಡ್ಕ ರಾಘವೇಂದ್ರ ಮಠದ ಸಭಾಭವನದಲ್ಲಿ ನಡೆಯಿತು.
ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಕರಾವಳಿ ಪ್ರಾದೇಶಿಕ ನೀರ್ದೇಶಕರಾಗಿರುವ ದುಗ್ಗೇಗೌಡ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ತಂಡಗಳು ಹೇಗಿರಬೇಕು, ಪದಾಧಿಕಾರಿಗಳಿಗಿರುವ ಜವಾಬ್ದಾರಿಯ ಬಗ್ಗೆ ತಿಳಿಸಿದರು.
ಪದವೀಧರ ಶಿಕ್ಷಕ ಗುರು ಎಂ.ಪಿ.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ನಾಯಕತ್ವದ ಬಗ್ಗೆ ಮಾಹಿತಿ ನೀಡಿದರು.
ಪ್ರಾದೇಶಿಕ ಕಛೇರಿಯ ಯೋಜನಾಧಿಕಾರಿ ರೂಪಾ ಜೈನ್, ಯೋಜನಾಧಿಕಾರಿ ಸುನೀತಾ, ಜಿಲ್ಲಾ ಪ್ರಬಂಧಕರು ಸುಬ್ರಾಯ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಮೇಲ್ವೀಚಾರಕ ವಿಠಲ್ ಅವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…