ಜನ ಮನದ ನಾಡಿ ಮಿಡಿತ

Advertisement

ಪುತ್ತಿಲ ಪರಿವಾರದಲ್ಲಿದ್ದ ಪುತ್ತೂರಾಯರವರು ಪಾಳಾಯ ಬದಲಿಸಿದ್ದೇಕೆ?

ಪುತ್ತೂರು : ನಗರಸಭೆ ಉಪಚುನಾವಣೆ ಸಂದರ್ಭ ಮಹತ್ವದ ಬೆಳವಣಿಗೆ : ಬಿಜೆಪಿ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಡಾ | ಸುರೇಶ್ ಪುತ್ತೂರಾಯ..!

ವಿದಾನಸಭಾ ಚುನಾವಣೆ ವೇಳೆ ಅರುಣ್ ಪುತ್ತಿಲ ಜತೆ ಗುರುತಿಸಿಕೊಂಡಿದ್ದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಕಳೆದ ವಿಧಾನ ಸಭೆ ಚುನಾವಣೆ ಹಾಗೂ ಆ ಬಳಿಕ ನಿನ್ನೆಯವರೆಗೆ ಪುತ್ತೂರಿನ 3ನೇ ರಾಜಕೀಯ ಶಕ್ತಿಯಾಗಿ ಕಾಣಿಸಿಕೊಳ್ಳುತ್ತಿರುವ ಪುತ್ತಿಲ ಪರಿವಾರದ ಭಾಗವಾಗಿದ್ದ ಪುತ್ತೂರಿನ ಖ್ಯಾತ ವೈದ್ಯ ಡಾ. ಸುರೇಶ್ ಪುತ್ತೂರಾಯ ದಿಢೀರ್ ಪಾಳಯ ಬದಲಿಸಿದ್ದಾರೆ. ಪುತ್ತೂರು ನಗರ ಸಭೆಗೆ ತೆರವಾದ ಎರಡು ಸ್ಥಾನಗಳಿಗೆ ಡಿ 27 ರಂದು ಉಪ ಚುನಾವಣೆ ನಿಗದಿಯಾಗಿದ್ದು, ಆ ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳು ಇಂದು ನಾಮ ಪತ್ರ ಸಲ್ಲಿಸಿದರು. ವಾರ್ಡ್ 1 ಕ್ಕೆ ಸುನೀತಾ ಹಾಗೂ ವಾರ್ಡ 11ಕ್ಕೆ ರಮೇಶ್ ರೈಯವರು ನಾಮಪತ್ರ ಸಲ್ಲಿಸಿದರು.


ನಾಮಪತ್ರ ಸಲ್ಲಿಕೆಗೂ ಮೊದಲು ಇಂದು ಬೆಳಿಗ್ಗೆ ಪುತ್ತೂರು ಶ್ರೀ ಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಅಭ್ಯರ್ಥಿಗಳು ಹಾಗೂ ಬಿಜೆಪಿ ಮುಖಂಡರು ಪ್ರಾರ್ಥನೆ ಸಲ್ಲಿಸಿದರು . ಈ ವೇಳೆ ಅಲ್ಲಿಗೆ ಆಗಮಿಸಿದ ಡಾ| ಪುತ್ತೂರಾಯರು ಇಬ್ಬರು ಅಭ್ಯರ್ಥಿಗಳಿಗೆ ಶುಭ ಹಾರೈಸಿದರು. ಡಾ ಸುರೇಶ್ ಪುತ್ತೂರು ದಿಢೀರ್ ಪಾಳಯ ಬದಲಾಯಿಸಲು ಕಾರಣವೇನು ಎಂದು ತಿಳಿದು ಬಂದಿಲ್ಲ.
ಈ ವೇಳೆ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಗ್ರಾಮಾಂತರ ಮಂಡಲ ಅದ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಹಿರಿಯ ಬಿಜೆಪಿ ಮುಖಮಡರಾದ ಚನಿಲ ತಿಮ್ಮಪ್ಪ ಶೆಟ್ಟಿ, ಜೀವಂಧರ್ ಜೈನ್, ದಿನೇಶ್ ಜೈನ್ , ರಾಮದಾಸ ಹಾರಾಡಿ ಮುಂತಾದವರು ಇದ್ದರು,ಬಳಿಕ ಬಿಜೆಪಿ ಅಭ್ಯರ್ತಿಗಳು ಹಾಗೂ ಬಿಜೆಪಿ ಮುಖಂಡರು ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!