ಮೂಡುಬಿದಿರೆ ಒಂಟಿಕಟ್ಟೆ ಯ ಕಡಲಕೆರೆ ನಿಸರ್ಗಧಾಮದ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆಯುವ ಕೋಟಿ-ಚೆನ್ನಯ 21ನೇ ವರ್ಷದ ಹೊನಲು ಬೆಳಕಿನ ಬಯಲು ಕಂಬಳೋತ್ಸವ ಡಿಸೆಂಬರ್ 17ರಂದು ಪೂರ್ವಾಹ್ನ ಗಂಟೆ 7.00ರಿಂದ ನಡೆಯಲಿದೆ ಎಂದು ಕಂಬಳ ಸಮಿತಿಯ ಅಧ್ಯಕ್ಷ ಶಾಸಕ ಉಮಾನಾಥ ಎ. ಕೋಟ್ಯಾನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಓಡಿಸಿದವರಿಗೆ ಕಾಲು ಪವನು ಚಿನ್ನದ ಬಹುಮಾನ ಲಭಿಸಲಿದೆ. ವಿಜೇತ ಕೋಣಗಳ ಸಹಾಯಕ ತಂಡಕ್ಕೆ ರೂ. 1000 ನಗದು ಬಹುಮಾನ ಲಭಿಸಲಿದೆ. ಪ್ರಧಾನ ತೀರ್ಪುಗಾರರಾಗಿ ವಿಶ್ರಾಂತ ಪ್ರಾಂಶುಪಾಲ ಕೆ. ಗುಣಪಾಲ ಕಡಂಬ, ವೀಕ್ಷಕ ವಿವರಣೆ ಮತ್ತು ತೀರ್ಪುಗಾರರಾಗಿ ರಾಜೀವ ಶೆಟ್ಟಿ ಎಡ್ತೂರು, ರವೀಂದ್ರ ಕುಮಾರ್ ಕುಕ್ಕುಂದೂರು, ನವೀನ್ಚಂದ್ರ ಅಂಬೂರಿ, ವಿಜಯಕುಮಾರ್ ಕಂಗಿನ ಮನೆ, ಸುಧಾಕರ ಶೆಟ್ಟಿ ಮುಗ್ರೋಡಿ, ಸತೀಶ್ ಹೊಸ್ಮಾರು, ವಿದ್ಯಾಧರ ಜೈನ್ ರೆಂಜಾಳ ಸಹಕರಿಸಲಿದ್ದಾರೆ. ವೀಡಿಯೋ ತೀರ್ಪುಗಾರರಾಗಿ ಬಂಟ್ವಾಳ ಮಹಾಕಾಳಿಬೆಟ್ಟು ಸೀತಾರಾಮ್ ಶೆಟ್ಟಿ, ಮೂಡುಬಿದಿರೆ ಕಂಬಳ ಸಮಿತಿ ಉಪಾಧ್ಯಕ್ಷ ಸುರೇಶ್ ಕೆ. ಪೂಜಾರಿ, ತೋಡಾರು ಪಂಚಶಕ್ತಿ ರಂಜಿತ್ ಪೂಜಾರಿ, ಸಹಕರಿಸಲಿ ದ್ದಾರೆ. ಸ್ಕೈವ್ಯೂ ಕಾರ್ಕಳ ವತಿಯಿಂದ ಲೇಸರ್ ಬೀಂ ನೆಟ್‌ವರ್ಕ್ ಸಿಸ್ಟಮ್ ಮತ್ತು ಟೈಮರ್ ಮೂಲಕ ದಾಖಲೀಕರಣ ನಡೆಯಲಿದೆ. ಕೋಣಗಳನ್ನು ಗದ್ದೆಗೆ ಇಳಿಸಲು ನೇಗಿಲು ಕಿರಿಯ ವಿಭಾಗಕ್ಕೆ ಪೂರ್ವಾಹ್ನ ಗಂಟೆ 8.00, ಹಗ್ಗ ಕಿರಿಯ ಮಧ್ಯಾಹ್ನ ಗಂಟೆ 11.00, ನೇಗಿಲು ಹಿರಿಯ ಮಧ್ಯಾಹ್ನ ಗಂಟೆ 12.00, ಹಗ್ಗ ಹಿರಿಯ ಮಧ್ಯಾಹ್ನ ಗಂಟೆ 2.00, ಕನೆಹಲಗೆ ಮತ್ತು ಅಡ್ಡಹಲಗೆ ಅಪರಾಹ್ನ ಗಂಟೆ 3.00ಕ್ಕೆ ಸಮಯ ನಿಗದಿ ಪಡಿಸಲಾಗಿದೆ.
ಕಳೆದ ಬಾರಿ 276ಜೊತೆ ಕೋಣಗಳು ಮೂಡುಬಿದಿರೆ ಕಂಬಳ ಕೂಟದಲ್ಲಿ ಭಾಗವಹಿಸಿದ್ದು, ಈ ಬಾರಿ ಮತ್ತಷ್ಟು ಜತೆ ಕೋಣಗಳು ಭಾಗವಹಿಸುವ ನಿರೀಕ್ಷೆಯಿದೆ.ಜಿಲ್ಲಾ ಕಂಬಳ ಸಮಿತಿಯು ಜಾರಿಗೊಳಿಸಿದ ಎಲ್ಲಾ ನಿಯಮ ಗಳನ್ನು ಈ ಕಂಬಳದಲ್ಲಿ ಪಾಲಿಸಲು ತೀರ್ಮಾನಿಸಲಾಗಿದೆ. ಅಹಿಂಸಾತ್ಮಕವಾಗಿ ಕಾನೂನಿನ ಚೌಕಟ್ಟಿನಲ್ಲಿ ನಿಗಧಿತ ಕಾಲಮಿತಿ ಯೊಳಗೆ ಕಂಬಳ ಕೂಟ ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿ ಮೂಡುಬಿದಿರೆ ಕಂಬಳ ಪ್ರಧಾನ ಕಾರ್ಯದರ್ಶಿ ಕೆ. ಗುಣಪಾಲ ಕಡಂಬ, ಕಾರ್ಯದರ್ಶಿ ರಂಜಿತ್ ಪೂಜಾರಿ, ಉಪಾಧ್ಯಕ್ಷ ಸುರೇಶ್ ಕೆ. ಪೂಜಾರಿ, ಪ್ರಮುಖರಾದ ಜಗದೀಶ್ ಅಧಿಕಾರಿ, ಈಶ್ವರ ಕಟೀಲ್ ಉಪಸ್ಥಿತರಿದ್ದರು
ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆಯುವ ಕಂಬಳೋತ್ಸವ ಈ ವರ್ಷದ ಯೋಜನೆಯಾಗಿ ಸುಮಾರು 50ಲಕ್ಷ ರೂ. ವೆಚ್ಚದಲ್ಲಿ ಆವರಣ ಗೋಡೆ ಹಾಗೂ ಸ್ವಾಗತ ದ್ವಾರ ನಿರ್ಮಿಸಲಾಗುತ್ತಿದೆ. 2023ರ ಅವಧಿಯಲ್ಲಿ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಮಂಜೂರುಗೊಂಡ ಅನುದಾನವನ್ನು ಬಳಸಿಕೊಂಡು ರಕ್ಷಣಾತ್ಮಕ ಮತ್ತು ಕಲಾತ್ಮಕ ಆವರಣ ಗೋಡೆ ನಿರ್ಮಾಣಕ್ಕೆ ಕಂಬಳ ಸಮಿತಿ ಕಾರ್ಯಯೋಜನೆ ರಚಿಸಿದೆ. ಆವರಣ ಗೋಡೆಯಲ್ಲಿ ನಿರ್ಮಿಸಲುದ್ದೇಶಿಸಿರುವ ಆಕರ್ಷಣೀಯ ಸ್ವಾಗತ ಗೋಪುರಕ್ಕೆ ದೇಶದ ಗಡಿಯಲ್ಲಿ ಉಗ್ರರ ಧಾಳಿಗೆ ಪ್ರಾಣತ್ಯಾಗ ಮಾಡಿದ ವೀರಯೋಧ ಕ್ಯಾಪ್ಟನ್ ಎಂ. ವಿ. ಪ್ರಾಂಜಲ್ ನಾಮಕರಣಗೊಳಿಸಲು ಸಮಿತಿ ನಿರ್ಧರಿಸಿದೆ ಎಂದು ಕಂಬಳ ಸಮಿತಿ ಕಾರ್ಯದರ್ಶಿ ರಂಜಿತ್ ಪೂಜಾರಿ ತೋಡಾರು ತಿಳಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…