ಉಡುಪಿ: ಶಂಕರಪುರ ವಿಶ್ವಾಸದಮನೆ ಪುನರ್ವಸತಿ ಕೇಂದ್ರ ಹಾಗೂ ಡಿ.ಜಿ.ಎಂ.ಬೇತೆಲ್ ಚರ್ಚ್ ಯೇಸುಪುರ ಇದರ ರಜತ ಮಹೋತ್ಸವ ಸಮಾರಂಭ ಇದೇ ಬರುವ ಡಿಸೆಂಬರ್ 20, 21ಮತ್ತು 22ರಂದು ಮೂರು ದಿನಗಳ ಕಾಲ ಶಂಕರಪುರದ ಕ್ಯಾನರಿ ಗಾರ್ಡನ್ ನಲ್ಲಿ ನಡೆಯಲಿದೆ ಎಂದು ವಿಶ್ವಾಸದಮನೆಯ ಸ್ಥಾಪಕ ಹಾಗೂ ಅಧ್ಯಕ್ಷ ಸುನೀಲ್ ಜಾನ್ ಡಿಸೋಜ ಹೇಳಿದರು.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವಾಸದಮನೆ ಕಳೆದ 25 ವರ್ಷಗಳಿಂದ ಸಾರ್ಥಕ ಸೇವೆಯನ್ನು ಮಾಡಿಕೊಂಡು ಬಂದಿದೆ. ಅನಾಥರು, ನಿರ್ಗತಿಕರು, ಮಾನಸಿಕ ಅಸ್ವಸ್ಥರಿಗೆ ಉಚಿತ ವಸತಿ, ಊಟ, ಬಟ್ಟೆಬರೆ ಹಾಗೂ ವೈದ್ಯಕೀಯ ಶುಶ್ರೂಷೆಗಳನ್ನು ನೀಡುತ್ತಿದೆ ಎಂದರು.
ಡಿ. 20 ರಂದು ಸಂಜೆ 4ಗಂಟೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಜತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ, ಯಶ್‌ಪಾಲ್ ಎ.ಸುವರ್ಣ, ಜಿಲ್ಲಾಧಿಕಾರಿ ವಿದ್ಯಾಕುಮಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಮಾಜ ಸೇವಕರಾದ ರೋಶನ್ ಬೆಳ್ಮಣ್, ವಿಶು ಶೆಟ್ಟಿ ಅಂಬಲಪಾಡಿ, ನಿತ್ಯಾನಂದ ಒಳಕಾಡು, ಈಶ್ವರ್ ಮಲ್ಪೆ, ರವಿ ಕಟಪಾಡಿ, ಆಸಿಫ್ ಆಪತ್ಭಾಂದವ, ಸೂರಿ ಶೆಟ್ಟಿ ಕಾಪು, ವಿನಯ್ ಸಾಸ್ತಾನ, ತನುಲಾ ಅವರನ್ನು ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…