ರಾಜ್ಯ

ಆಳ್ವಾಸ್ ವಿರಾಸತ್ 2023 – ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ – ವರದಿ

ದಕ್ಷಿಣ ಕನ್ನಡ : ಶಿಕ್ಷಣ ಕಾಶಿ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ತನ್ನ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಒಟ್ಟು ನಾಲ್ಕು ದಿನಗಳ ‘ಆಳ್ವಾಸ್ ವಿರಾಸತ್‌-2023 ರಾಷ್ಟ್ರೀಯ ಸಾಂಸ್ಕೃತಿಕ ಕಾರ್ಯಕ್ರಮ ಗುರುವಾರ ಆರಂಭಗೊಂಡಿತು. ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯಪಾಲರು ಉದ್ಘಾಟಿಸಿದರು, ‘ವಸುಧೈವ ಕುಟುಂಬಕಂ ಪರಿಕಲ್ಪನೆ ಆಳ್ವಾಸ್‌ ಶಿಕ್ಷಣ ಸಂಸ್ಥೆಯಲ್ಲಿ ಸಾಕಾರಗೊಳ್ಳುತ್ತಿರುವುದಕ್ಕೆ ತಮ್ಮ ಉದ್ಘಾಟನಾ ಭಾಷಣದಲ್ಲಿ ಸಂತಸ ವ್ಯಕ್ತಪಡಿಸಿದರು .
ಅಧ್ಯಕ್ಷತೆ ವಹಿಸಿದ್ದ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ, ‘ಆಳ್ವಾಸ್‌ನಲ್ಲಿ ಜ್ಞಾನದ ಜಾತ್ರೆ ಮತ್ತು ಯಾತ್ರೆ ನಡೆಯುತ್ತಿದೆ. ಮಕ್ಕಳಿಗೆ ಪಠ್ಯ ಶಿಕ್ಷಣದ ಜೊತೆಗೆ ಸಂಸ್ಕೃತಿ, ಸಂಸ್ಕಾರದ ಶಿಕ್ಷಣ ಆಳ್ವಾಸ್ ನೀಡುತ್ತಿದೆ ಜ್ಞಾನದ ಜೊತೆಗೆ ‌ವಿಜ್ಞಾನ ಬೆಳೆಯಬೇಕು. ಇವೆಲ್ಲವೂ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ದೊರೆಯುತ್ತಿರುವುದಕ್ಕೆ ಶಿಕ್ಷಣ ಸಂಸ್ಥೆಯನ್ನು ಅಭಿನಂದಿಸಿದರು.

ಆಳ್ವಾಸ್ ವಿರಾಸತ್ ಕಾರ್ಯಕ್ರಮಕ್ಕೆ ಎಲ್ಲರನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾಕ್ಟರ್ ಮೋಹನ ಆಳ್ವ ಸ್ವಾಗತಿಸಿದರು, ಹಾಗೂ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವಂತೆ ವಿನಂತಿಸಿದರು.

ಆಳ್ವಾಸ್‌ ವಿರಾಸತ್‌ನ ಎರಡನೇ ದಿನವೂ ಜನ ಸಾಗರವೇ ಹರಿದು ಬಂದಿದೆ.  ಬೆಳಗ್ಗಿನಿಂದಲೇ ಮಕ್ಕಳು ಹಿರಿಯರು ಸೇರಿದಂತೆ ಲಕ್ಷಾಂತರ ಮಂದಿ ಆಗಮಿಸುತ್ತಲೇ ಇದ್ದರು.

ಸಂಜೆಯ ಸಂಗೀತ ಕಾರ್ಯಕ್ರಮದ ವೇಳೆ ಜನ ಸಾಗರವೇ ಹರಿದು ಬಂದಿದೆ. ಬೆನ್ನಿ ದಯಾಳ್‌ ಸಂಗೀತ ಕಾರ್ಯಕ್ರಮದ ಸಂಗೀತ ಕಾರ್ಯಕ್ರಮಕ್ಕೆ ಒಂದು ಗಂಟೆ ಮೊದಲೇ ಜನ ಬಂದು ಕುರ್ಚಿ ಅಲಂಕರಿಸಿದ್ದರು. ಸುಮಾರು 60 ಸಾವಿರ ಮಂದಿ ಕುಳಿತುಕೊಳ್ಳುವ ಸಾಮರ್ಥ್ಯದ ಸಭಾಂಗಣದ ವೇದಿಕೆ ಸಂಪೂರ್ಣ ಭರ್ತಿಯಾಗಿತ್ತು. ಆಹಾರ ಮೇಳ, ಪ್ರದರ್ಶನ ಮಳಿಗೆಗಳು, ಕೃಷಿ ಮೇಳ ಸೇರಿದಂತೆ ಎಲ್ಲ ಮೇಳಗಳೂ ಜನರಿಂದ ತುಂಬಿತ್ತು. ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳಿಂದಲೂ ವಿದ್ಯಾರ್ಥಿಗಳು ಆಗಮಿಸಿದ್ದರು. ಊರ ಪರವೂರ ನಾಗರಿಕರು ಕಾರ್ಯಕ್ರಮದಲ್ಲಿ ಕುಟುಂಬ ಸಹಿತ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ಆಳ್ವಾಸ್ ವಿರಾಸತ್‌ನ ಮೂರನೇ ದಿನವಾದ ಶನಿವಾರ ಸಂಜೆ 6ರಿಂದ ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್‌ ಅವರಿಂದ ಭಾವ ಲಹರಿ ಸಂಗೀತ ಕಾರ್ಯಕ್ರಮ ನಡೆಯಿತು. ಬಳಿಕ ರಾತ್ರಿ 8 ರಿಂದ ಆಳ್ವಾಸ್‌ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಿತು.

ವಿರಾಸತ್‌ನ ಮೂರನೇ ದಿನವಾದ ಶನಿವಾರವೂ ಸಪ್ತ ಮೇಳ ಗಮನ ಸೆಳೆಯಿತು. ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಆವರಣದಲ್ಲಿ ಆಯೋಜಿಸಲಾದ ಕೃಷಿ ಮೇಳ, ಆಹಾರ ಮೇಳ, ಫಲಪುಷ್ಪ ಮೇಳ, ಕರಕುಶಲ ಮತ್ತು ಪ್ರಾಚ್ಯವಸ್ತು ಪ್ರದರ್ಶನ ಮೇಳ, ಚಿತ್ರಕಲಾ ಮೇಳ, ಕಲಾಕೃತಿಗಳ ಪ್ರದರ್ಶನ, ಛಾಯಾಚಿತ್ರಗಳ ಪ್ರದರ್ಶನವನ್ನು ಸಾವಿರಾರು ಮಂದಿ ವೀಕ್ಷಿಸಿದರು.

ಡಿ. 17ರಂದು ಸಂಜೆ 5.15ರಿಂದ ಆಳ್ವಾಸ್‌ ವಿರಾಸತ್‌ 2023 ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಡಾ| ಮೈಸೂರು ಮಂಜುನಾಥ್‌, ಡಾ| ಪ್ರವೀಣ್‌ ಗೋಡ್ಖಿಂಡಿ ಮತ್ತು ವಿಜಯ ಪ್ರಕಾಶ್‌ ಅವರಿಗೆ ವಿರಾಸತ್‌ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. 6.30ರಿಂದ 7.15ರ ವರೆಗೆ ನಡೆಯುವ ತಾಳ-ವಾದ್ಯ-ಸಂಗೀತದಲ್ಲಿ ಡಾ| ಮೈಸೂರು ಮಂಜುನಾಥ್‌, ಡಾ| ಪ್ರವೀಣ್‌ ಗೋಡ್ಖಿಂಡಿ, ವಿಜಯ ಪ್ರಕಾಶ್‌ ಮತ್ತು ಬಳಗ ಮೋಡಿ ಮಾಡಲಿದೆ. ಆದೇ ರೀತಿ, ಸಂಜೆ 7.30 ರಿಂದ 9.30ರ ವರೆಗೆ ಖ್ಯಾತ ಚಲನಚಿತ್ರ ಗಾಯಕ ವಿಜಯ ಪ್ರಕಾಶ್‌ ಅವರಿಂದ ಸಂಗೀತ ರಸಸಂಜೆ ನಡೆಯಲಿದೆ. ರಾತ್ರಿ 9.30 ರಿಂದ 10.15ರ ವರೆಗೆ ಆಳ್ವಾಸ್‌ ಸಾಂಸ್ಕೃತಿಕ ವೈಭವ ಜರಗಲಿದೆ.
ಆಳ್ವಾಸ್‌ ವಿರಾಸತ್‌ಗೆ ಪ್ರತೀದಿನ ಸಾವಿರಾರು ಮಂದಿ ಆಗಮಿಸಿದ್ದರೂ, ಕ್ಯಾಂಪಸ್‌ನ ಸುಮಾರು 200 ಎಕರೆ ಪ್ರದೇಶದ , ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ . ಟ್ರಾಲಿ, ಟ್ರಾಕ್ಟರ್‌, ಲಾರಿಯಲ್ಲಿ ತ್ಯಾಜ್ಯ ನಿರ್ವಹಣೆ ಮಾಡುತ್ತಿದ್ದು, ಅಲ್ಲಲ್ಲಿ ಕಸದ ಡಬ್ಬಿ ಇಡಲಾಗಿದೆ. ಸ್ವಚ್ಛತೆಯ ನಿಟ್ಟಿನಲ್ಲಿ ಬೆಳಗ್ಗೆ 8.30ರಿಂದ ರಾತ್ರಿ 11.30ರ ವರೆಗೆ ಸುಮಾರು ನೂರಕ್ಕೂ ಅಧಿಕ ಮಂದಿ ಕೆಲಸ ನಿರ್ವಹಿಸುತ್ತಿದ್ದಾರೆ. ಆಹಾರ ಮೇಳದಲ್ಲಿ ಉಪಯೋಗಿಸುವ ನೀರಿನ ಸ್ವಚ್ಛತೆಯ ಬಗ್ಗೆಯೂ ಕಾಳಜಿ ವಹಿಸಲಾಗಿದೆ . ಹಸಿ ಕಸ, ಒಣ ಕಸ ಮತ್ತು ಪ್ಲಾಸ್ಟಿಕ್‌ ಅನ್ನು ಪ್ರತ್ಯೇಕವಾಗಿ ಬೇರ್ಪಡಿಸಿ ಸಂಸ್ಕರಣೆ ಮಾಡಲಾಗುತ್ತದೆ. ಪ್ಲಾಸ್ಟಿಕ್‌ ಬಳಕೆಯನ್ನು ಕಡಿಮೆ ಮಾಡಲಾಗಿದೆ.

ಕಾರ್ಯಕ್ರಮದ ಬಗ್ಗೆ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮುಖ್ಯಸ್ಥ, ವಿರಾಸತ್ ಸಂಘಟಕ ಡಾಕ್ಟರ್ ಮೋಹನ ಆಳ್ವ ಮಾತನಾಡಿ 28 ವರ್ಷಗಳ ಹಿಂದೆ ಆರಂಭಿಸಿದ ವಿರಾಸತ್ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದೆ. ಒಂದು ಜಿಲ್ಲೆಗೆ ಸೀಮಿತವಾಗಿದ್ದ ಈ ಕಾರ್ಯಕ್ರಮ ಜಾಗತಿಕ ಮಟ್ಟಕ್ಕೆ ವಿಸ್ತರಿಸಿರುವುದು ಮನಸ್ಸಿಗೆ ಸಂತೋಷ ನೀಡಿದೆ ಎಂದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…

3 days ago

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…

3 days ago

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…

3 days ago

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…

3 days ago

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…

3 days ago

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…

3 days ago