ಉಡುಪಿ: ಶಿರ್ವ ಪೆಜತ್ತಕಟ್ಟೆಯಲ್ಲಿ ನಿರ್ಮಿಸಲಾಗಿರುವ ನೂತನ ಶಾಂಭವಿ ಉಚಿತ ಆರೋಗ್ಯ ತಪಾಸಣಾ ಕೇಂದ್ರದ ಉದ್ಘಾಟನೆ ಸಮಾರಂಭ ಇಂದು ನಡೆಯಿತು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆರೋಗ್ಯ ತಪಾಸಣಾ ಕೇಂದ್ರವನ್ನು ಉದ್ಘಾಟಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಮುಕ್ಕ ಎ. ಶಾಮರಾವ್ ಫೌಂಡೇಶನ್ ನ ಉಪಾಧ್ಯಕ್ಷ ಎ. ಶ್ರೀನಿವಾಸನ್ ರಾವ್, ಶಿರ್ವ ಆರೋಗ್ಯ ಮಾತಾ ಚರ್ಚ್ ಧರ್ಮಗುರು ಲೆಸ್ಲಿ ಕ್ಲಿಫರ್ಡ್ ಡಿಸೋಜಾ, ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ರಾಜೇಶ್, ಕೆ. ಮನೋಹರ್ ಶೆಟ್ಟಿ, ಲೋಹಿತ್ ಉಪಸ್ಥಿತರಿದ್ದರು.







