ಕಾಪುವಿನ ಸಮಾಜ ಸೇವಕ ಲೀಲಾಧರ ಶೆಟ್ಟಿಯವರ ಅಪ್ರಾಪ್ತ ವಯಸ್ಸಿನ ಸಾಕು ಮಗಳ ನಾಪತ್ತೆ ಪ್ರಕರಣಕ್ಕೆ ಸಂಬಂದಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತರನ್ನು ಆಕೆಯ ಸ್ನೇಹಿತ ಶಿರ್ವ ನಿವಾಸಿ ಗಿರೀಶ್ (20), ನಾಪತ್ತೆಯಾಗಲು ಸಹಕರಿಸಿದ ಶಿರ್ವದ ರೂಪೇಶ್ (22), ಜಯಂತ್ (23) ಮತ್ತು ಮಜೂರು ನಿವಾಸಿ ಮೊಹಮ್ಮದ್ ಅಜೀಝ್ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಮತ್ತು ಲೀಲಾಧರ ಶೆಟ್ಟಿಯವರ ಸಾಕು ಪುತ್ರಿಯನ್ನು ಪೊಲೀಸರು ಕುಂಬ್ಳೆ ಬಳಿ ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.
ಲೀಲಾಧರ ಶೆಟ್ಟಿ ಯವರು 16 ವರ್ಷಗಳ ಹಿಂದೆ ಹೆಣ್ಣು ಮಗುವೊಂದನ್ನು ದತ್ತು ಪಡೆದಿದ್ದು, ಆಕೆ ಡಿಸೆಂಬರ್ 11 ರಂದು ಏಕಾಏಕಿ ನಾಪತ್ತೆಯಾಗಿದ್ದಳು. ಈ ಘಟನೆಯಿಂದ ನೊಂದು ಸಮಾಜಕ್ಕೆ ಹೆದರಿ ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆಗೆ ಸಂಬಂಧಪಟ್ಟಂತೆ ಕಾಪು ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ಮತ್ತು ನಾಪತ್ತೆ ಪ್ರಕರಣಗಳು ದಾಖಲಾಗಿದ್ದವು. ಆರೋಪಿ ಗಿರೀಶ್ ವಿರುದ್ದ ಪೋಕ್ಸೋ, ಅತ್ಯಾಚಾರ, ಅಪಹರಣ ಪ್ರಕರಣ ಮತ್ತು ಸ್ನೇಹಿತರ ವಿರುದ್ದ ಪೋಕ್ಸೋ ಪ್ರಕರಣವನ್ನು ದಾಖಲಿಸಲಾಗಿದೆ.ಜಿಲ್ಲಾ ಪೋಲಿಸ್ ವರಿಷ್ಟಾದಿಕಾರಿ ಡಾಕ್ಟರ್ ಅರುಣ್ ಕೆ, ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ, ಕಾರ್ಕಳ ಡಿವೈಎಸ್ ಪಿ ಅರವಿಂದ ಕಲ್ಲಗುಜ್ಜಿ ಮಾರ್ಗದರ್ಶನದಲ್ಲಿ ಕಾಪು ಪಿ ಎಸ್ ಐ ಅಬ್ದುಲ್ ಖಾದರ್ ಮತ್ತು ತಂಡ ಆರೋಪಿಗಳನ್ನು ಬಂಧಿಸಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…