ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ:ಡಿಸೆಂಬರ್ 27 ರಂದು ಮುಲ್ಕಿ ತಾಲೂಕು ಘಟಕದ ವತಿಯಿಂದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ

ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್, ಮುಲ್ಕಿ ತಾಲೂಕು ಘಟಕದ ವತಿಯಿಂದ ಮುಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 27 ಬುಧವಾರ ಮುಲ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಮ್ಮೇಳನಾಧ್ಯಕ್ಷರಾದ ಡಾ. ಗಣೇಶ್ ಅಮೀನ್ ಸಂಕಮಾರ್ ನೇತೃತ್ವದಲ್ಲಿ ನಡೆಯಲಿದ್ದು ಪೂರ್ವಭಾವಿ ಸಭೆ ಕಾರ್ನಾಡ್ ಸರಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.


ದ.ಕ.ಜಿಲ್ಲಾ ಸಾಹಿತ್ಯ ಪರಿಷತ್, ಮುಲ್ಕಿ ತಾಲೂಕು ಘಟಕದ ಅಧ್ಯಕ್ಷ ಮಿಥುನ್ ಕೊಡೆತ್ತೂರು ಮಾತನಾಡಿ ಸಮ್ಮೇಳನದಲ್ಲಿ ಕನ್ನಡ ನಾಡು ನುಡಿಗೆ ಪ್ರಾಶಸ್ತ್ಯ ನೀಡುವುದರ ಜೊತೆಗೆ ಪ್ರಥಮ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಲು ಸರ್ವ ರೀತಿಯಲ್ಲಿ ಎಲ್ಲರೂ ಸಹಕರಿಸಬೇಕು ಎಂದು ವಿನಂತಿಸಿದರು.
ಸಮ್ಮೇಳನ ಸಮಿತಿಯ ಅಧ್ಯಕ್ಷ ಸುನಿಲ್ ಆಳ್ವ ಮಾತನಾಡಿ ಮುಲ್ಕಿ ತಾಲೂಕು ನೂತನವಾಗಿ ರಚನೆಯಾಗಿದ್ದು ಪ್ರಥಮ ಸಾಹಿತ್ಯ ಸಮ್ಮೇಳನದ ಮೂಲಕ ತಾಲೂಕು ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯಬೇಕಾಗಿದ್ದು ಸರ್ವರ ಪ್ರೋತ್ಸಾಹ ಬೇಕು ಎಂದರು.
ಸಮಿತಿಯ ಕಾರ್ಯದರ್ಶಿ ದೇವಪ್ರಸಾದ್ ಪುನರೂರು, ಸಂಚಾಲಕ ಡಾ. ವಾಸುದೇವ ಬೆಳ್ಳೆ, ಸಮಿತಿಯ ಸದಸ್ಯರಾದ ಮೋಹನ್ ದಾಸ್ ಸುರತ್ಕಲ್, ಅಶೋಕ್ ಕುಮಾರ್ ಶೆಟ್ಟಿ, ಮತ್ತಿತರರು ಮಾತನಾಡಿದರು
ಸಭೆಯಲ್ಲಿ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ನ ವೆಂಕಟೇಶ್ ಹೆಬ್ಬಾರ್, ಮಾಜೀ ನಪಂ ಸದಸ್ಯ ಅಬ್ದುಲ್ ರಸಾಕ್ ಮತ್ತಿತರರು ಸಲಹೆ ಸೂಚನೆಗಳನ್ನು ನೀಡಿದರು. ವೇದಿಕೆಯಲ್ಲಿ ಪ್ರೌಢಶಾಲಾ ಶಿಕ್ಷಕರಕ್ಷಕ ಸಂಘದ ಯೋಗಿನಿ, ಸಮಿತಿಯ ಜೊಸ್ಸಿ ಪಿಂಟೊ ಉಪಸ್ಥಿತರಿದ್ದರು. ಸಭೆಯಲ್ಲಿ ಸಮ್ಮೇಳನದ ನೂತನ ಸಮಿತಿಯ ಬಗ್ಗೆ ಮಾಹಿತಿ ನೀಡಲಾಯಿತು

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!