ಇತರೆ

ಮುಲ್ಕಿ: ನಿವೃತ್ತ ಉಪನ್ಯಾಸಕ ಸುಬ್ಬರಾವ್ ನಿಧನ

ಮುಲ್ಕಿ: ಇಲ್ಲಿಗೆ ಸಮೀಪದ ಶಿಮಂತೂರು ನಿವಾಸಿ ನಿವೃತ್ತ ಉಪನ್ಯಾಸಕ ಸುಬ್ಬರಾವ್ (93) ಮಂಗಳವಾರ ಸಂಜೆ ನಿಧನರಾದರು ಅವರು 2 ಪುತ್ರರು ಹಾಗೂ 3 ಪುತ್ರಿಯರನ್ನ ಅಗಲಿದ್ದಾರೆ.


ಆರಂಭಿಕ ಶೈಕ್ಷಣಿಕ ಹಂತದಲ್ಲಿ ಅವರು 5 ನೆಯ ತರಗತಿಯವರೆಗೆ ಮಾತ್ರ ಶಿಕ್ಷಣ ಪಡೆದು ಬಳಿಕ ಎಸ್ಎಸ್ಎಲ್ಸಿ ,ಪಿಯುಸಿ, ಬಿಎ, ಬಿಎಡ್, ಎಂಎ ಶಿಕ್ಷಣವನ್ನು ಖಾಸಗಿಯಾಗಿ ತೇರ್ಗಡೆಯಾದರು.
ಬಳಿಕ ಪ್ರೌಢಶಾಲಾ ಶಿಕ್ಷಕರಾಗಿ ಬಳ್ಳಾರಿ, ಶೃಂಗೇರಿ, ಹಾಸನ, ಕೆಂಚನಹಳ್ಳಿ,ಕನ್ಯಾನದಲ್ಲಿ ಸೇವೆ ಸಲ್ಲಿಸಿದ್ದ ಅವರು ಉಪನ್ಯಾಸಕರಾಗಿ ಮುಲ್ಕಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸುಮಾರು ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದರು.
ಯಕ್ಷಗಾನ ತಾಳಮದ್ದಳೆ ಅರ್ಥದಾರಿಯಾಗಿ, ಪುರಾಣ ಪ್ರವಚನಕಾರರಾಗಿ, ಕನ್ನಡ ಮತ್ತು ಸಂಸ್ಕೃತ ವಿದ್ವಾಂಸರಾಗಿ ,ಅಧ್ಯಾಪಕರಾಗಿ, ಕೃಷಿಕರಾಗಿ , ಪುರೋಹಿತರಾಗಿ ಜನಾನುರಾಗಿಯಾಗಿದ್ದರು ಅವರ ಸಾಧನೆಗೆ ಕಿನ್ನಿಗೋಳಿಯ ಯಕ್ಷಲಹರಿ ಸಂಸ್ಥೆ ವತಿಯಿಂದ 1998 ರಲ್ಲಿ ಗೌರವಿಸಲ್ಪಟ್ಟಿದ್ದರು.ಅವರ ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ,ವೇ.ಮೂ. ವಾದಿರಾಜ ಉಪಾಧ್ಯಾಯ ಕೊಲಕಾಡಿ, ಶಿಮಂತೂರು ಶ್ರೀ ಆದಿಯ ಜನಾರ್ಧನ ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ ಶೆಟ್ಟಿ, ಕಿಲ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ವಿಕಾಸ್ ಶೆಟ್ಟಿ, ಮಾಜೀ ಅಧ್ಯಕ್ಷ ಧನಂಜಯ ಮಟ್ಟು,ಮಾಜೀ ಉಪಾಧ್ಯಕ್ಷ ಗೋಪಿನಾಥ ಪಡಂಗ, ಅತಿಕಾರಿಬೆಟ್ಟು ಗ್ರಾ.ಪಂ ಸದಸ್ಯ ದಯಾನಂದ ಮಟ್ಟು, ಬಪ್ಪನಾಡು ಲಯನ್ಸ್ ಕ್ಲಬ್ ಇನ್ಸ್ಪೈರ್ ನ ಸ್ಥಾಪಕ ಅಧ್ಯಕ್ಷ ವೆಂಕಟೇಶ ಹೆಬ್ಬಾರ್,
ಶ್ರೀಪತಿ ಭಟ್ ಶಿಮಂತೂರು, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ವಾಸುದೇವ ಬೆಳ್ಳೆ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ,ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ,ಪತ್ರಕರ್ತ ಪುನೀತ್ ಕೃಷ್ಣ, ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…

8 hours ago

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…

8 hours ago

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…

1 day ago

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…

1 day ago

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…

1 day ago

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…

1 day ago