ಬಂಟ್ವಾಳ: ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಯೋರ್ವನಿಗೆ ಕಾರೊಂದು ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ನಡೆದಿದ್ದು, ಘಟನೆಯ ಕುರಿತಾಗಿ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ.
ಬಿಸಿರೋಡಿನ ತಲಪಾಡಿ ಬಸ್ ಡಿಪೋ ದ ಮುಂಭಾಗದಲ್ಲಿ ರಸ್ತೆಯ ಬದಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ಹೆದ್ದಾರಿಯಲ್ಲಿ ಬಿಸಿರೋಡು ಕಡೆಯಿಂದ ಬಂದ ಕಾರು ಡಿಕ್ಕಿಯಾಗಿದೆ.
ಚಿತ್ರದುರ್ಗಾ ತಾಲೂಕಿನ ಮಾಳಪ್ಪನ ಹಟ್ಟಿಮನೆ ನಿವಾಸಿ ಆರ್.ಪ್ರಭು ಗಾಯಗೊಂಡವರು.
ಕಿಸನ್ ಎನ್ನುವ ವ್ಯಕ್ತಿ ಅತೀ ವೇಗ ಮತ್ತು ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿಕೊಂಡು ಬಂದ ಕಾರಣದಿಂದ ಈ ಅಪಘಾತ ಸಂಭವಿಸಿದ್ದು, ಅಪಘಾತದಿಂದ ಆರ್.ಪ್ರಭು ಅವರಿಗೆ ಗಾಯವಾಗಿತ್ತು.
ಗಾಯಗೊಂಡಿದ್ದ ಆರ್. ಪ್ರಭು ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿಲಾಗಿದ್ದು, ಚಿಕಿತ್ಸಾ ಹಾಗೂ ಖರ್ಚು ವೆಚ್ಚಗೆ ಕಾರು ಚಾಲಕ ಕೊಡುತ್ತೇನೆಂದು ಹೇಳಿ ಮೋಸ ಮಾಡಿದ್ದ, ಹಾಗಾಗಿ ತಡವಾಗಿ ದೂರು ನೀಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಕಾರು ಮತ್ತು ಬೈಕ್ ನಡುವೆ ಸಜೀಪ ನಡು ಎಂಬಲ್ಲಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಬಗ್ಗೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯ ಲ್ಲಿ ದೂರು ದಾಖಲಾಗಿದೆ.
ಲೊರೆಟ್ಟೋ ನಿವಾಸಿ ಖಲಂದರ್ ಶಾಫಿ ಗಾಯಗೊಂಡ ವ್ಯಕ್ತಿ.
ಖಲಂದರ್ ಶಾಫಿ ಅವರು ಮುಡಿಪು ಕಡೆಯಿಂದ ಲೊರೆಟ್ಟೊ ಕಡೆಗೆ ಮುಂಜಾನೆ ಸುಮಾರು 3 ಗಂಟೆ ವೇಳೆ ದ್ವಿ ಚಕ್ರವಾಹನದಲ್ಲಿ ಬರುತ್ತಿದ್ದ ವೇಳೆ ಬಿಸಿರೋಡಿನ ಕಡೆಯಿಂದ ಮುಡಿಪು ಕಡೆಗೆ ಹೋಗುತ್ತಿದ್ದ ಕಾರು ನಜೀಪ ನಡು ಎಂಬಲ್ಲಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯಿಂದ ಬೈಕ್ ಖಲಂದರ್ ಅವರಿಗೆ ಗಾಯವಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಚಾಲಕ ರಿತೇಶ್ ಅವರ ಅತೀ ವೇಗ ಮತ್ತು ಅಜಾಗರೂಕತೆಯಿಂದ ಮಾಡಿದ ಚಾಲನೆಯೇ ಅಪಘಾತ ಸಂಭವಿಸಲು ಕಾರಣ ಎಂದು ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…