ಮಣಿಪಾಲ: ಕಾಲೇಜಿನಲ್ಲಿ ಪಾಠ ಮಾಡುತ್ತಿರುವಾಗಲೇ ಹಠಾತ್ ಕುಸಿದುಬಿದ್ದು ಪ್ರಾಧ್ಯಾಪಕರೊಬ್ಬರು ಮೃತಪಟ್ಟ ಘಟನೆ ಮಣಿಪಾಲ ಫಾರ್ಮಸ್ಯುಟಿಕಲ್ ಸೈನ್ಸ್ ಕಾಲೇಜಿನಲ್ಲಿ ಇಂದು ಬೆಳಿಗ್ಗೆ 11.50ರ ಸುಮಾರಿಗೆ ನಡೆದಿದೆ.
ಮೃತರನ್ನು ಮಣಿಪಾಲ ಕಾಲೇಜ್ ಆಫ್ ಫಾರ್ಮಸ್ಯುಟಿಕಲ್ ಸೈನ್ಸ್ ಇದರ ಪ್ರೊ. ಡಾ.ಅಲೆಕ್ಸ್ ಜೋಸೆಫ್(47) ಎಂದು ಗುರುತಿಸಲಾಗಿದೆ. ಇವರು ತನ್ನ ಪತ್ನಿ (ಅದೇ ಕಾಲೇಜಿನ ಸಹಾಯಕ ಪ್ರೊ. ಎಂಜೆಲ್ ಟ್ರೀಸಾ ಅಲೆಕ್ಸ್ ) ಜೊತೆ ಬೆಳಿಗ್ಗೆ 8 ಗಂಟೆಗೆ ಕಾಲೇಜಿಗೆ ತೆರಳಿದ್ದರು.
ಕಾಲೇಜಿನಲ್ಲಿರುವ ವೇಳೆ ಡಾ.ಅಲೆಕ್ಸ್ ಜೋಸೆಫ್ ಅವರಿಗೆ ವಿಪರೀತ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅಲ್ಲಿ ಪರೀಕ್ಷಿಸಿದ ವೈದ್ಯರು ಅಲೆಕ್ಸ್ ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…