ಜನ ಮನದ ನಾಡಿ ಮಿಡಿತ

Advertisement

ಕುಂದಾಪುರ: ಹೆಜ್ಜೇನು ದಾಳಿಗೆ ವ್ಯಕ್ತಿ ಬಲಿ

ಉಡುಪಿ: ಹೆಜ್ಜೇನು ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ.


ಹೆಜ್ಜೇನು ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಬಸ್ರೂರಿನ ಬಸ್ ನಿಲ್ದಾಣ ಬಳಿಯ ನಿವಾಸಿ ಜಗಜೀವನ್ (76) ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇವರು ಮನೆಯಿಂದ ಬಸ್ರೂರಿನ ಬಸ್ ನಿಲ್ದಾಣ ಬಳಿ ಬರುವಾಗ ಹೆಜ್ಜೇನು ಹಿಂಡು ದಾಳಿ ನಡೆಸಿವೆ. ಬಸ್ ನಿಲ್ದಾಣ ಬಳಿಯಿದ್ದ ಹೆಜ್ಜೇನು ಹಿಂಡಿಗೆ ಯಾವುದೋ ಹಕ್ಕಿ ಬಡಿದ ಕಾರಣ ಹೆಜ್ಜೇನುಗಳು ಅದೇ ದಾರಿಯಲ್ಲಿ ಬರುತ್ತಿದ್ದ ಜಗಜೀವನ್ ಅವರ ಮೇಲೆ ದಾಳಿ ನಡೆಸಿವೆ. ಏಕಕಾಲದಲ್ಲಿ ನೂರಾರು ಹೆಜ್ಜೇನುಗಳು ದಾಳಿ ನಡೆಸಿದ್ದರಿಂದ ಮುಖ, ದೇಹ, ಕೈ-ಕಾಲುಗಳೆಲ್ಲ ಊದಿಕೊಂಡು, ಗಂಭೀರ ಗಾಯಗೊಂಡಿದ್ದರು ಎನ್ನಲಾಗಿದೆ.
ತಕ್ಷಣವೇ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ ತಿಳಿದುಬಂದಿದೆ.

Leave a Reply

Your email address will not be published. Required fields are marked *

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

error: Content is protected !!