ಮುಲ್ಕಿ: ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಾಯರು ಕೆರೆಕಾಡು ಬಳಿ ಪುನರ್ ನಿರ್ಮಾಣಗೊಳ್ಳಲಿರುವ ಸಾರ್ವಜನಿಕ ಹಿಂದೂ ರುದ್ರ ಭೂಮಿಗೆ ಶಿಲಾನ್ಯಾಸ ಕಾರ್ಯಕ್ರಮ ಕೆರೆಕಾಡು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಆರ್ಚಕ ರಾಘವೇಂದ್ರ ರಾವ್ ಪೌರೋಹಿತ್ಯದಲ್ಲಿ ನಡೆಯಿತು.

ಮುಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಶಿಲಾ ನ್ಯಾಸ ನೆರವೇರಿಸಿದರು ಮುಖ್ಯ ಅತಿಥಿಗಳಾಗಿ ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಸುಮಾ ಚಂದ್ರಶೇಖರ್, ಉಪಾಧ್ಯಕ್ಷ ಹೇಮನಾಥ ಅಮೀನ್, ಕಿಲ್ಪಾಡಿ ಗ್ರಾಪಂ ಉಪಾಧ್ಯಕ್ಷೆ ದಮಯಂತಿ ಶೆಟ್ಟಗಾರ್, ಪಂಚಾಯತ್ ಸದಸ್ಯರಾದ ವಿನೋದ್ ಸಾಲ್ಯಾನ್ ಬೆಳ್ಳಾಯರು, ವಿಜಯಲಕ್ಷ್ಮಿ,ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ನಿಶ್ಮಿತಾ ಶೆಟ್ಟಿ, ಹಿಂದೂ ರುದ್ರ ಭೂಮಿಯ ಅಧ್ಯಕ್ಷ ಲಕ್ಷ್ಮಣ್ ಸಾಲ್ಯಾನ್, ಸ್ಥಳೀಯರಾದ ರಾಜಶೇಖರ ರಾವ್, ಮಾಜೀ ತಾ. ಪಂ. ಸದಸ್ಯ ಜೀವನ್ ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯದರ್ಶಿ ಮಾಧವ ಶೆಟ್ಟಿಗಾರ್ ನಿರೂಪಿಸಿದರು.



