ಇತರೆ

ಡಾಂಬರ್ ನಲ್ಲಿ ಸಿಲುಕಿ ಒದ್ದಾಡಿದ ನಾಗರ ಹಾವು.. ವಿಡಿಯೋ ವೈರಲ್

ದಕ್ಷಿಣಕನ್ನಡ:ಡಾಂಬರ್ ನಲ್ಲಿ ಸಿಲುಕಿದ ನಾಗರಹಾವೊಂದನ್ನು ಪುತ್ತೂರಿನ ಉರಗಪ್ರೇಮಿ ತೇಜಸ್ ಬನ್ನೂರು ರಕ್ಷಿಸಿ ಹಾವಿಗೆ ಜೀವದಾನ ಮಾಡಿದ್ದಾರೆ.ಡಾಂಬರ್ ನಲ್ಲಿ ಸಿಲುಕಿ ಒದ್ದಾಡುತ್ತಿದ್ದ ಹಾವನ್ನು ಎರಡು ದಿನಗಳ ಕಠಿಣ ಪರಿಶ್ರಮದೊಂದಿಗೆ ತೇಜಸ್ ರಕ್ಷಿಸಿದ್ದು, ತೇಜಸ್ ಕಾರ್ಯಕ್ಕೆ ಸಾಮಾಜಿಕ ತಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ತೇಜಸ್ ತಾನು ಹಾವನ್ನು ರಕ್ಷಿಸುವ ಕಾರ್ಯಾಚರಣೆಯ ವಿಡಿಯೋವನ್ನು ತಮ್ಮ ಗೆಳೆಯರೊಂದಿಗೂ ಹಂಚಿಕೊಂಡಿದ್ದಾರೆ.


ಉರಿ ಬಿಸಿಲಿನಲ್ಲಿ ಡಾಂಬರ್ ರಸ್ತೆಯಲ್ಲಿ ಸಿಲುಕಿ ಹಾವು ಹಾಗು ಇತರ ಸಣ್ಣ ಪ್ರಾಣಿಗಳು ಒದ್ದಾಡೋದು ಸಾಮಾನ್ಯವಾಗಿದ್ದು, ಇಂಥ ಸಮಯದಲ್ಲಿ ಅವುಗಳನ್ನು ರಕ್ಷಿಸಲು ಹೋಗುವವರ ಸಂಖ್ಯೆ ಕಡಿಮೆಯೇ. ಅದರಲ್ಲೂ ವಿಷಜಂತುಗಳು ಸಿಲುಕಿಕೊಂಡಿದ್ದರೆ, ಅದರ ಬಳಿಗೂ ಹೋಗದೆ ಹಾವುಗಳನ್ನು ಅಲ್ಲೇ ಬಿಟ್ಟು ಹೋಗುವವರೇ ಹೆಚ್ಚು. ಆದರೆ ತೇಜಸ್ ಬನ್ನೂರು ಇಂಥಹ ಹಲವು ಕಾರ್ಯಗಳನ್ನು ಮಾಡಿದ್ದು, ಅದರಲ್ಲೂ ಹಾವುಗಳನ್ನು ರಕ್ಷಿಸಿ ಅವುಗಳಿಗೆ ಜೀವದಾನವನ್ನು ಮಾಡಿರುವ ಹಲವು ಉದಾಹರಣೆಗಳಿವೆ.
ಅದೇ ರೀತಿಯ ಒಂದು ಕಾರ್ಯಾಚರಣೆಯನ್ನು ತೇಜಸ್ ಬನ್ನೂರು ಪುತ್ತೂರಿನ ನೆಹರೂನಗರದಲ್ಲಿ ಮಾಡಿದ್ದಾರೆ. ನಗರದ ಮನೆಯೊಂದರಲ್ಲಿ ಡಾಂಬರ್ ಡಬ್ಬಿಗಳನ್ನು ಶೇಖರಿಸಿಟ್ಟ ಪ್ರದೇಶದಲ್ಲಿ ನಾಗರಹಾವು ಪತ್ತೆಯಾಗಿತ್ತು. ಹಾವೊಂದು ಡಾಂಬರ್ ಡಬ್ಬಿಗಳ ಅಂಚಿನಲ್ಲಿ ಹೋಗಿರುವುದನ್ನು ಗಮನಿಸಿದ್ದ ಮನೆ ಮಂದಿ ತೇಜಸ್ ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಆದರೆ ತೇಜಸ್ ಅಲ್ಲಿಗೆ ಬರುವ ಮೊದಲೇ ಆ ಹಾವು ಅಲ್ಲಿಂದ ತಪ್ಪಿಸಿ ಬೇರೆ ಕಡೆಗೆ ಹೋಗಿತ್ತು. ಡಾಂಬರ್ ಡಬ್ಬಿಗಳನ್ನು ಪರಿಶೀಲನೆ ನಡೆಸುವ ಸಂದರ್ಬದ ಡಬ್ಬದಿಂದ ನೆಲಕ್ಕೆ ಹರಿದಿದ್ದ ಡಾಂಬರ್ ನಲ್ಲಿ ಮತ್ತೊಂದು ಹಾವು ಬಿದ್ದಿರುವುದು ತೇಜಸ್ ಗಮನಕ್ಕೆ ಬಂದಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ತೇಜಸ್ ಹಾವನ್ನು ತನ್ನ ಬೇರೊಂದು ಕಡೆಗೆ ವರ್ಗಾಯಿಸಿ ಅಲ್ಲಿ ಹಾವಿನ ಚರ್ಮದಿಂದ ಡಾಂಬರ್ ಅನ್ನು ತೆಗೆಯುವ ಪ್ರಯತ್ನ ಮಾಡಿದ್ದಾರೆ.


ನಾಗರಹಾವಿನ ಚರ್ಮದಿಂದ ಡಾಂಬರ್ ತೆಗೆಯಲು ಎರಡು ದಿನಗಳ ಕಾಲ ಶ್ರಮಪಟ್ಟಿದ್ದಾರೆ. ನಾಗರಹಾವನ್ನು ಶುದ್ಧ ಕೊಬ್ಬರಿ ಎಣ್ಣೆಯಲ್ಲಿ ಒಂದು ದಿನ ಸಂಪೂರ್ಣ ಅದ್ದಿ ಇಟ್ಟು ಬಳಿಕ ಅದರ ಮೇಲಿಂದ ಡಾಂಬರ್ ಅನ್ನು ಬೇರ್ಪಡಿಸಿದ್ದಾರೆ. ಸುಮಾರು ಒಂದು ವರ್ಷ ಪ್ರಾಯದ ನಾಗರಹಾವು ಚೇತರಿಸಿಕೊಂಡ ಬಳಿಕ ಅದನ್ನು ಸುರಕ್ಷಿತವಾಗಿ ಕಾಡಿಗೆ ಬಿಡುವ ಕಾರ್ಯವನ್ನೂ ತೇಜಸ್ ಮಾಡಿದ್ದಾರೆ. ತೇಜಸ್ ಪ್ರಕಾರ ಡಾಂಬರ್ ನಲ್ಲಿ ಸಿಕ್ಕಿಹಾಕಿಕೊಂಡ ಹಾವಿನ ಚರ್ಮಕ್ಕೆ ಕೊಂಚ ಹಾನಿಯಾಗಿದ್ದರೂ, ಇನ್ನು ಕೆಲವೇ ಹಾವಿಗೆ ಹೊಸ ಚರ್ಮ ಬರಲಿದೆ. ಇದರಿಂದಾಗಿ ಈಗಿರುವ ಚರ್ಮ ಕಳಚಿ ಹೋಗಲಿದೆ. ಇದರಿಂದಾಗಿ ಹಾವಿಗೆ ಯಾವುದೇ ರೀತಿಯ ಸಮಸ್ಯೆಯಾಗುವುದಿಲ್ಲ. ಹಾವಿನ ಎಲ್ಲಾ ಚಲನವಲನಗಳನ್ನು ಪರೀಕ್ಷಿಸಿದ ಬಳಿಕವೇ ಹಾವನ್ನ ಸುರಕ್ಷಿತ ಪ್ರದೇಶಕ್ಕೆ ಬಿಡಲಾಗಿದೆ. ತೇಜಸ್ ಬನ್ನೂರು ಈವರೆಗೆ ಇಂಥಹ ಹಲವು ರೀತಿಯ ಕಾರ್ಯಾಚರಣೆಗಳ ಮೂಲಕ ಮೂಕ ಪ್ರಾಣಿಗಳನ್ನು ರಕ್ಷಿಸಿದ್ದು, ಅದರಲ್ಲೂ ಹಾವುಗಳನ್ನು ರಕ್ಷಿಸಿ ಸಂರಕ್ಷಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…

15 hours ago

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…

15 hours ago

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…

15 hours ago

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…

15 hours ago

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…

15 hours ago

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…

15 hours ago