ಉಡುಪಿ: ಹೃದಯಾಘಾತ ಸಂಭವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಡುಪಿ ತಾಲೂಕಿನ ಸಂತೆಕಟ್ಟೆ ಸಮೀಪದ ಕೆಮ್ಮಣ್ಣು ಎಂಬಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಕೆಮ್ಮಣ್ಣು ನಿವಾಸಿ ಅಫ್ಕಾರ್ (17) ಎಂದು ಗುರುತಿಸಲಾಗಿದೆ. ಈತ ಕಲ್ಯಾಣಪುರ ಮಿಲಾಗ್ರಿಸ್ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು. ಹುಟ್ಟಿನಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅಫ್ಕಾರ್, ಡಿಸೆಂಬರ್ 6 ರಂದು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದಿದ್ದನು. ಡಿ. 18 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದನು. ಆದರೆ, ಊರಿಗೆ ಹಿಂದಿರುಗಿದ ಸಂದರ್ಭದಲೇ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಅಫ್ಕಾರ್ ಕೊನೆಯುಸಿರೆಳೆದಿದ್ದಾನೆ. ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…