ಪುದು ಮಾಪ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸರಕಾರ ಅನುದಾನದ ಜತೆಗೆ ಫರಂಗಿಪೇಟೆ ಟುಡೇ ಫೌಂಡೇಶನ್ ಸಹಕಾರದೊಂದಿಗೆ ನಿರ್ಮಾಣಗೊಂಡ ನೂತನ ಕಟ್ಟಡ ಹಾಗೂ ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್ ಅವರು ಹಿಂದಿನ ಶಿಕ್ಷಣ ಸಚಿವ ನಾಗೇಶ್ ಅವರು ಪ್ರತಿ ಕ್ಷೇತ್ರಕ್ಕೆ ತಲಾ 2೦ ಶಾಲಾ ಕೊಠಡಿಗಳನ್ನು ನೀಡಿದ್ದು, ನನಗೆ ಆತ್ಮೀಯರಾಗಿ 2 ಹೆಚ್ಚುವರಿ ಕೊಠಡಿ ನೀಡಿದ್ದಾರೆ. ಈಗಿನ ಸಚಿವರ ಬಳಿಯೂ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಗಮನಹರಿಸುವಂತೆ ತಿಳಿಸಲಾಗಿದ್ದು, ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದರು.ಪುದು ಮಾಪ್ಲ ಸರಕಾರಿ ಶಾಲೆಯಲ್ಲಿ ಮೂಲಭೂತ ಸೌಕರ್ಯ ಇಲ್ಲದ ವೇಳೆಯೂ ಸ್ಥಳೀಯ ಪೋಷಕರು ತಮ್ಮ ಮಕ್ಕಳನ್ನು ತಾಳ್ಮೆಯಿಂದ ಈ ಶಾಲೆಗೆ ಕಳುಹಿಸಿದ್ದು, ಅಂದಿನ ಶಿಕ್ಷಕರ ತಂಡ ಹಾಗೂ ಟುಡೇ ಫೌಂಡೇಶನ್ ಸಹಕಾರದಿಂದ 4೦ ಇದ್ದ ಈ ಶಾಲೆಯ ಮಕ್ಕಳ ಸಂಖ್ಯೆ ಪ್ರಸ್ತುತ 6೦೦ಕ್ಕೆ ಏರಿ ಶಾಲೆ ರಾಜ್ಯಕ್ಕೆ ಮಾದರಿಯಾಗಿದೆ ರಾಜ್ಯ ವಿಧಾಸಭೆಯ ಸಭಾಪತಿ ಯು.ಟಿ.ಖಾದರ್ ಹೇಳಿದರು.
ವಿಧಾನ ಪರಿಷತ್ ಶಾಸಕ ಹರೀಶ್‌ಕುಮಾರ್ ಮಾತನಾಡಿ, ಖಾಸಗಿ ಶಾಲೆಗಿಂತ ಸರಕಾರಿ ಶಾಲೆಗಳ ವಾತಾವರಣವೇ ಭಿನ್ನವಾಗಿದ್ದು, ಇಲ್ಲಿ ಮಕ್ಕಳಿಗೆ ಹೆಚ್ಚಿನ ಸ್ವಾತಂತ್ರ ಇರುತ್ತದೆ. ಪ್ರಸ್ತುತ ಸರಕಾದ ವಿಶೇಷ ಗಮನ, ಆಂಗ್ಲ ಶಿಕ್ಷಣದಿಂದ ಸರಕಾರಿ ಶಾಲೆಗಳ ಮಕ್ಕಳು ಕೀಳರಿಮೆಯನ್ನು ಬಿಟ್ಟು ಶಾಲೆಗೆ ಹೋಗುವ ಸ್ಥಿತಿ ಇದೆ ಎಂದರು.
ಪುದು ಗ್ರಾ.ಪಂ.ಅಧ್ಯಕ್ಷೆ ರಶೀದಾ ಬಾನು ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ.ಮಾಜಿ ಅಧ್ಯಕ್ಷರಾದ ರಮ್ಲಾನ್ ಮಾರಿಪಳ್ಳ, ಪ್ರಕಾಶ್ಚಂದ್ರ ರೈ ದೇವಸ್ಯ, ಉಪಾಧ್ಯಕ್ಷ ಇಕ್ಬಾಲ್ ಸುಜೀರು, ಸೇವಾಂಜಲಿ ಪ್ರತಿಷ್ಠಾನದ ಅಧ್ಯಕ್ಷ ಕೆ.ಕೃಷ್ಣಕುಮಾರ್ ಪೂಂಜ, ಮೇರಮಜಲು ಗ್ರಾ.ಪಂ.ಮಾಜಿ ಅಧ್ಯಕ್ಷೆ ವೃಂದಾ ಪೂಜಾರಿ, ಅಕ್ಷರ ದಾಸೋಹ ಜಿಲ್ಲಾ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ., ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಽಕಾರಿ ಶೀಲಾವತಿ, ದೈಹಿಕ ಶಿಕ್ಷಣ ಪರಿವೀಕ್ಷಣಾಽಕಾರಿ ವಿಷ್ಣುನಾರಾಯಣ ಹೆಬ್ಬಾರ್, ಗ್ರಾ.ಪಂ.ಪಿಡಿಒ ಹರೀಶ್ ಕೆ.ಎ, ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಜಿ.ಕೆ.ನಾಯ್ಕ್, ತಾ.ಪಂ.ಮಾಜಿ ಸದಸ್ಯ ಆಸೀಫ್ ಇಕ್ಬಾಲ್, ಪ್ರಮುಖರಾದ ಹನೀಫ್ ಹಾಜಿ ಗೋಳ್ತಮಜಲು, ಎ.ಜೆ.ಶೇಖರ್, ಅಬುಸಾಲಿ, ಇಮ್ತಿಯಾಜ್ ತುಂಬೆ, ರಮ್ಲಾನ್ ಕುಂಪನಮಜಲು, ಭಾಸ್ಕರ ರೈ, ಅಬ್ದುಲ್ ಮಜೀದ್ ಫರಂಗಿಪೇಟೆ, ಅಬೂಬಕ್ಕರ್ ಫರಂಗಿಪೇಟೆ, ಮುಖ್ಯಶಿಕ್ಷಕಿ ಯಮುನಾ, ಸುಜೀರ್ ಪ್ರೌಢಶಾಲಾ ಮುಖ್ಯಶಿಕ್ಷಕಿ ಶಶಿಮಂಗಳ, ಗ್ರಾ.ಪಂ.ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ.ಖಾದರ್, ಟುಡೇ ಪೌಂಡೇಶನ್ ಅಧ್ಯಕ್ಷ ಉಮ್ಮರ್ ಫಾರೂಕ್, ನಿಕಟಪೂರ್ವ ಮುಖ್ಯಶಿಕ್ಷಕಿ ಶಕುಂತಳಾ ಎಸ್.ಉಳ್ಳಾಲ್, ಸಹಾಯಕ ಎಂಜಿನಿಯರ್ ರವಿಕುಮಾರ್, ಗುತ್ತಿಗೆದಾರ ಯಶೋಧರ ಪೊಳಲಿ ಅವರನ್ನು ಸನ್ಮಾನಿಸಲಾಯಿತು.
ಜಿ.ಪಂ.ಮಾಜಿ ಸದಸ್ಯ ಉಮ್ಮರ್ ಫಾರೂಕ್ ಪ್ರಸ್ತಾವನೆಗೈದು ಸ್ವಾಗತಿಸಿದರು. ಹಮೀದ್ ಗೋಳ್ತಮಜಲು ಕಾರ್ಯಕ್ರಮ ನಿರ್ವಹಿಸಿದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…