ಉಡುಪಿ: ಹಿರಿಯ ಯಕ್ಷಗಾನ ಕಲಾವಿದ ಪೇತ್ರಿ ಬಾಲಕೃಷ್ಣ ನಾಯಕ್(59) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ನಿಧನ ಹೊಂದಿದರು.
ಎಲ್ಲಾ ರೀತಿಯ ವೇಷಗಳನ್ನೂ ಸಮರ್ಥವಾಗಿ ನಿರ್ವಹಿಸುತಿದ್ದ ಬಾಲಕೃಷ್ಣ ನಾಯಕ್ ಪಾರಂಪರಿಕ ಹೆಜ್ಜೆಗಾರಿಕೆ ಹಾಗೂ ಮಾತುಗಾರಿಕೆಗೆ ಖ್ಯಾತರಾಗಿದ್ದರು. ಮಾರಣಕಟ್ಟೆ, ಕಳವಾಡಿ, ಅಮೃತೇಶ್ವರಿ, ಮಂದಾರ್ತಿ, ಹಾಲಾಡಿ, ಮೇಗರವಳ್ಳಿ, ಮಡಾಮಕ್ಕಿ ಹಾಗೂ ಹಿರಿಯಡ್ಕ ಮೇಳ ಸೇರಿದಂತೆ ಸುಮಾರು ಮೂರೂವರೆ ದಶಕಗಳ ಕಾಲ ಯಕ್ಷಗಾನ ಕಲಾಸೇವೆಗೈದಿದ್ದಾರೆ.
ಇವರು ಓರ್ವ ಉತ್ತಮ ಪ್ರಸಾಧನತಜ್ಞರೂ ಆಗಿದ್ದರು.ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಯಕ್ಷನಿಧಿಯ ಸದಸ್ಯರಾಗಿದ್ದ ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…