ಉಡುಪಿ: 2022-23 ನೇ ಸಾಲಿನ ಕಾರ್ಮಿಕರ ಕಲ್ಯಾಣ ನಿಧಿ ಯೋಜನೆಯ ಅಡಿಯಲ್ಲಿರುವ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಹಾಗೂ ವಿದ್ಯಾರ್ಥಿ ವೇತನ ಕಡಿತಗೊಳಿಸಿರುವ ರಾಜ್ಯ ಸರ್ಕಾರದ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ತಾಲೂಕು ಸಂಚಾಲಕರಾದ ಅಜಿತ್ ಜೋಗಿ ಅವರು, ರಾಜ್ಯ ಸರಕಾರ ವಿದ್ಯಾರ್ಥಿ ವೇತನ ಬಿಡುಗಡೆ ಮಾಡದೆ ವಿದ್ಯಾರ್ಥಿಗಳ ಬಗ್ಗೆ ಅಸಡ್ಡೆ ತೋರಿದೆ ಎಂದು ವ್ಯಕ್ತಪಡಿಸಿದರು.
ನಗರ ಕಾರ್ಯದರ್ಶಿ ಶ್ರೀವತ್ಸ ಮಾತನಾಡಿ, 4 ಲಕ್ಷ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವುದನ್ನು ರದ್ದುಗೊಳಿಸಿರುವ ಸರಕಾರ ಎಲ್ಲರಿಗೂ ಈ ಕೂಡಲೇ ವಿದ್ಯಾರ್ಥಿ ವೇತನ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಸಂಹಿತಾ ಕೆ. ನಗರ ಖೆಲೋ ಭಾರತ್ ಪ್ರಮುಖರಾದ ಸ್ವಸ್ತಿಕ್ ನಗರ ಸಂಪರ್ಕ ಪ್ರಮುಖ್ ರವಿಚಂದ್ರ ಮತ್ತು ಪ್ರಮುಖರಾದ ಕಿಶೋರ್, ನವೀನ್, ಹರ್ಷೇಂದ್ರ, ವರುಣ್, ಪ್ರಷ್ಮಾ, ಮಂಗಳಗೌರಿ, ಕೃತಿ ಪಾಲ್ಗೊಂಡಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…