ಕುಂದಾಪುರ: ಬಸ್ಸಿನಡಿಗೆ ಬಿದ್ದ ಸೈಕಲ್ ಸವಾರ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ, ಪವಾಡ ಸದೃಶವಾಗಿ ಪಾರಾದ ಘಟನೆ ಕುಂದಾಪುರದ ಶಾಸ್ತ್ರಿ ಸರ್ಕಲ್ ಬಳಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಆ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಶಾಸ್ತ್ರಿ ಸರ್ಕಲ್ ಬಳಿ ಸೈಕಲ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರು ಬೈಂದೂರು ಕಡೆಗೆ ಏಕಾಏಕಿ ತಿಗುರುತ್ತಿದ್ದ ಖಾಸಗಿ ಬಸ್‌ನಡಿಗೆ ಬಿದ್ದಿದ್ದಾರೆ. ಈ ವೇಳೆ ಬಸ್ಸನ್ನು ಚಾಲಕ ನಿಲ್ಲಿಸಿದ್ದರಿಂದ ಯಾವುದೇ ಅನಾಹುತ ಆಗಿಲ್ಲ. ಇಲ್ಲದಿದ್ದರೆ ಸೈಕಲ್ ಸವಾರರಿಗೆ ಏನಾದರೂ ಅನಾಹುತ ಆಗುವ ಸಂಭವವೂ ಇತ್ತು.
ಬಸ್ ಗಳು ಸಮಯ ಪಾಲನೆ ಧಾವಂತದಲ್ಲಿ ವೇಗವಾಗಿ ಸಂಚರಿಸುತ್ತಾ, ರಸ್ತೆಯಲ್ಲಿ ಸಂಚರಿಸುವ ಇತರರ ಬಗ್ಗೆ ಎಚ್ಚರವೇ ವಹಿಸುತ್ತಿಲ್ಲ ಎನ್ನುವುದಾಗಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…