ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆಯಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದ ಸಚಿವ ಗುಂಡೂರಾವ್

ಮೂಡುಬಿದಿರೆ: ಮೂಡುಬಿದಿರೆ ಹಾಗೂ ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಡಯಾಲಿಸಿಸ್ ಯಂತ್ರಗಳು ಹಾಗೂ ಟೆಕ್ನಿಷಿಯನ್ಸ್ಗಳನ್ನು ಮುಂದಿನ ತಿಂಗಳೊಳಗೆ ಒದಗಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೆಳಿದರು.



ಮೂಡುಬಿದಿರೆ ತಾಲೂಕು ಆಡಳಿತ ಸೌಧದಲ್ಲಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿ ಅವರು ಮಾತನಾಡಿದರು ಮುಂದಿನ ತಿಂಗಳಿನಿoದ ತಾಲೂಕುವಾರು ಜನಸ್ಪಂದನ ಸಭೆ ನಡೆಸಿ ಸ್ಥಳೀಯವಾದ ಸಣ್ಣಪುಟ್ಟ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು. ಜನಸಾಮಾನ್ಯರು ಸಲ್ಲಿಸುವ ಅರ್ಜಿಗಳು ಕಾಲಮಿತಿಯೊಳಗೆ ಇತ್ಯರ್ಥಗೊಳ್ಳಲು ಇದು ಸಹಕಾರಿಯಾಗಲಿದೆ ಎಂದ ಅವರು ಜನರಿಗೆ ನೇರ ತಲುಪುವ ಸರ್ಕಾರದ ನಾಲ್ಕು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದ್ದು ಯುವನಿಧಿಯನ್ನು ಮುಂದಿನ ತಿಂಗಳಿನಿAದ ಜಾರಿಗೊಳಿಸಲಾಗುವುದು ಎಂದರು.
ಶಾಸಕ ಉಮನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.


ಪೇಟೆಯ ಹೃದಯಭಾಗದಲ್ಲಿ ಪುರಸಭೆ ಮಾರುಕಟ್ಟೆಯ ಕಾಮಗಾರಿ ಕಾನೂನು ತೊಡಗಿಕಿಂದಾಗಿ ಅರ್ಧದಲ್ಲೇ ನಿಂತಿದೆ. ಇದರಿಂದ ವ್ಯಾಪಾರಿಗಳಿಗೆ ಮಾತ್ರವಲ್ಲ ಜನರಿಗೂ ತೊಂದರೆಯಾಗುತ್ತಿದೆ ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಸಚಿವರ ಗಮನಕ್ಕೆ ತಂದರು. ಈ ಕುರಿತು ಪರಿಶೀಲಿಸಿ, ಮಾರುಕಟ್ಟೆ ನಿರ್ಮಾಣಕ್ಕೆ ಪೂರಕವಾದ ಪ್ರಯತ್ನಗಳನ್ನು ಮಾಡುವಂತೆ ಸಚಿವರು ಜಿಲ್ಲಾಧಿಕಾರಿಯವರಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಮುಲ್ಲೆöÊ ಮುಗಿಲನ್, ಸಹಾಯಕ ಆಯುಕ್ತ ಹರ್ಷವರ್ಧನ್, ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಉಪಸ್ಥಿತರಿದ್ದರು. ಉಪತಹಸೀಲ್ದಾರ್ ರಾಮ ಕೆ. ಫಲಾನುಭವಿಗಳ ವಿವರ ನೀಡಿದರು. ಒಟ್ಟು 109 ಮಂದಿಗೆ ಪಿಂಚಣಿ, 94ಸಿ, 94ಸಿಸಿಯಡಿ ಆದೇಶ ಪತ್ರ ವಿತರಿಸಲಾಯಿತು.

Leave a Reply

Your email address will not be published. Required fields are marked *

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

error: Content is protected !!