ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮೈಸೂರು ಸಂಸ್ಥಾನದ ಒಡೆಯರ್ ಬೇಟಿ

ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮೈಸೂರು ಅರಮನೆಯ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ಮುಲ್ಕಿ ಸೀಮೆಯ ಬಪ್ಪನಾಡು ದೇವಸ್ಥಾನಕ್ಕೆ ಪ್ರಥಮ ಬಾರಿ ಭೇಟಿ ನೀಡಿದ ಮೈಸೂರು ಒಡೆಯರ್ ರವರನ್ನು ಶ್ರೀ ಕ್ಷೇತ್ರದ ವತಿಯಿಂದ ವಿವಿಧ ವಾದ್ಯಗೋಷ್ಠಿಗಳೊಂದಿಗೆ ಭವ್ಯ ಮೆರವಣಿಗೆಯಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿಭವ್ಯವಾಗಿ ಸ್ವಾಗತಿಸಿದರು.

ಕ್ಷೇತ್ರದ ಅರ್ಚಕ ಶ್ರೀಪತಿ ಉಪಾಧ್ಯಾಯ ಹಾಗೂ ನರಸಿಂಹ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಒಡೆಯರ್ ರವರನ್ನು ಕ್ಷೇತ್ರದ ವತಿಯಿಂದ ಗೌರವಿಸಿ ಪ್ರಸಾದ ನೀಡಿದರು.
ಬಳಿಕ ಧಾರ್ಮಿಕ ಸಭೆಯಲ್ಲಿ ಮೈಸೂರ್ ಒಡೆಯರ್ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆ ಧಾರ್ಮಿಕ, ಶೈಕ್ಷಣಿಕ ಸಹಿತ ಎಲ್ಲಾ ಕ್ಷೇತ್ರದಲ್ಲಿ ಮುಂದುವರೆದಿದ್ದು ಇಲ್ಲಿ ಬರುವುದೇ ಒಂದು ಭಾಗ್ಯ, ದಕ್ಷಿಣ ಕನ್ನಡ ಹಾಗೂ ಮೈಸೂರು ಸಂಸ್ಥಾನಕ್ಕೆ ಅವಿನಾಭಾವ ಸಂಬಂಧವಿದ್ದು ಇಲ್ಲಿನ ಜನರ ಸಂಸ್ಕಾರ ಹಾಗೂ ಸಂಸ್ಕೃತಿ ನೋಡುವುದೇ ಒಂದು ಭಾಗ್ಯ ಎಂದರು.


ಈ ಸಂದರ್ಭ ಅಳದಂಗಡಿಯ ಪದ್ಮಪ್ರಸಾದ ಅಜಿಲರು, ಸ್ವರೂಪ್ ಗೋಪಾಲ್ ರಾಜ್ ಆನಂದ್, ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು, ಗೌತಮ್ ಜೈನ್ ಮುಲ್ಕಿ ಅರಮನೆ, ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಜಯಮ್ಮ ಪಿ, ಜೀರ್ಣೋದ್ಧಾರ ಸಮಿತಿಯ ಸುನಿಲ್ ಆಳ್ವ
ಮುಲ್ಕಿ ನಾಲ್ಕು ಪಟ್ನ ಮೊಗವೀರ ಸಭಾದ ಅಧ್ಯಕ್ಷ ಸುಜಿತ್ ಸಾಲ್ಯಾನ್, ಉದ್ಯಮಿ ಶರತ್ ಕರ್ಕೇರ ಹೊಸಬೆಟ್ಟು, ಮೊಗವೀರ ಮುಖಂಡ ಗುರುವಪ್ಪ ಕೋಟ್ಯಾನ್, ಸಂಜೀವ ದೇವಾಡಿಗ ನಾಗೇಶ್ ಬಪ್ಪನಾಡು, ಶಿವಶಂಕರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!