ಉಡುಪಿ: ಉತ್ತರ ಭಾರತದ ಖತರ್ನಾಕ್ ಕಳ್ಳರ ಗ್ಯಾಂಗ್ ಹೋಲುವ ತಂಡವೊಂದು ಉಡುಪಿಯಲ್ಲಿ ಕೈಚಳಕ ಮಾಡುತ್ತಿರುವ ಬಗ್ಗೆ ಅನುಮಾನ ಮೂಡಿದೆ.
ಉಡುಪಿಯ ಸಂತಕಟ್ಟೆಯ ನವಮಿ ಬೇಕರಿ ಮಾಲೀಕರ ಮನೆಯಲ್ಲಿ ಕಳ್ಳತನ ಮಾಡುವಾಗ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯವೊಂದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಕಳ್ಳರು ಕೇವಲ ಚಡ್ಡಿಯನ್ನು ಹಾಕಿಕೊಂಡು, ಮೈ ತುಂಬಾ ಎಣ್ಣೆ ಹಚ್ಚಿಕೊಳ್ಳುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಚ್ಚಾ ಬನಿಯನ್ ಗ್ಯಾಂಗ್ ಅಲಿಯಾಸ್ ಚಡ್ಡಿ ಗ್ಯಾಂಗ್ ಉತ್ತರ ಭಾರತದಲ್ಲಿ ವಿಲಕ್ಷಣ ಮಾದರಿಯಲ್ಲಿ ಕಳ್ಳತನ ನಡೆಸುತ್ತಿತ್ತು. ಸೊಂಟಕ್ಕೆ ಎರಡು ಚಪ್ಪಲಿಯನ್ನು ಸಿಕ್ಕಿಸಿಕೊಂಡು ಕಸುಬಿಗೆ ಇಳಿಯುವ ಈ ತಂಡ, ಕೃತ್ಯ ನಡೆಸಿದ ಸ್ಥಳದಲ್ಲಿ ಒಂದು ಚಪ್ಪಲಿಯನ್ನು ಬಿಟ್ಟು ಹೋಗುತ್ತಿತ್ತು.
ಉಡುಪಿಯಲ್ಲಿ ಕಂಡುಬಂದ ಈ ತಂಡವೂ ಇಂಥದ್ದಲ್ಲೆವನ್ನೂ ಮಾಡುತ್ತಿದೆ. ಮನೆಮಂದಿ ನಿದ್ದೆಯಲ್ಲಿರುವಾಗ ಬಾಗಿಲನ್ನು ಒಡೆದು ಒಳಪ್ರವೇಶಿಸಿದ ಕಳ್ಳರು ಎರಡೂವರೆ ಲಕ್ಷ ರೂಪಾಯಿ ಮೌಲ್ಯದ ಚಿನ್ನ ಬೆಳ್ಳಿಯನ್ನು ಕದ್ದೊಯ್ದಿದ್ದಾರೆ. ನಗರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಗಳ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ಮಾಡುತ್ತಿದ್ದಾರೆ
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…