ಜನ ಮನದ ನಾಡಿ ಮಿಡಿತ

Advertisement

‘ಸರ್ಕಾರಕ್ಕೆ ಹಿಜಾಬ್‌ ವಾಪಸ್‌ ಆದೇಶ ಹೊರಡಿಸಲು ಕೇವಲ 30 ನಿಮಿಷ ಸಾಕು’; ಕರ್ನಾಟಕ ಸರ್ಕಾರ ವಿರುದ್ದ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ವಾಗ್ದಾಳಿ

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು 7 ತಿಂಗಳಾದರೂ ರಾಜ್ಯದಲ್ಲಿ ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುವ ಆದೇಶವನ್ನು ಹೊರಡಿಸಿಲ್ಲ ಎಂದು ಕರ್ನಾಟಕ ಸರ್ಕಾರ ವಿರುದ್ದ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ವಾಗ್ದಾಳಿ ನಡೆಸಿದ್ದಾರೆ.

ಹಿಜಬ್‌ ನಿಷೇಧ ವಾಪಸ್‌ಗೆ ಕರ್ನಾಟಕ ಸರ್ಕಾರ ಏಳು ತಿಂಗಳು ಏಕೆ ತೆಗೆದುಕೊಂಡಿದೆ? ಸಿಎಂ ಸಿದ್ದರಾಮಯ್ಯ ಅವರು, ನಿಮಗೆ ಬೇಕಾದ್ದನ್ನು ಅವರು ಧರಿಸಬಹುದು ಅಂತಾ ಹೇಳಿದ್ರು. ಇದಾದ ಕೆಲವೇ ಗಂಟೆಗಳಲ್ಲಿ ನಾವು ಇನ್ನೂ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದರು.
ಇದು ಅತ್ಯಂತ ದುರದೃಷ್ಟಕರ ಎಂದು ಓವೈಸಿ ಬೇಸರ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಮುಸ್ಲಿಮರು ನಿರಾಸೆ ಅನುಭವಿಸುತ್ತಿದ್ದಾರೆ. ಹಿಜಬ್‌ ವಾಪಸ್‌ಗೆ ಆದೇಶ ಹೊರಡಿಸಲು ಕೇವಲ 30 ನಿಮಿಷ ಸಾಕು. ಹೀಗಿರುವಾಗ ಕರ್ನಾಟಕ ಸರ್ಕಾರವನ್ನು ತಡೆಯುತ್ತಿರುವವರು ಯಾರು ಎಂದು ಟಾಂಗ್‌ ಕೊಟ್ಟಿದ್ದಾರೆ.ಶಿಕ್ಷಣ ಸಂಸ್ಥೆಗಳಲ್ಲಿ ಹಿಜಬ್ ಧರಿಸುವುದರ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಆಡಳಿತವು ಚಿಂತನೆ ನಡೆಸುತ್ತಿದೆ ಮತ್ತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಹಿಜಬ್‌ ವಾಪಸ್‌ ಕುರಿತು ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಪಕ್ಷ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಸಿದ್ದರಾಮಯ್ಯ ಅವರು ವೋಟಿಗಾಗಿ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

error: Content is protected !!