ಜನ ಮನದ ನಾಡಿ ಮಿಡಿತ

Advertisement

ಸುರತ್ಕಲ್ ಬಂಟರ ಸಂಘದಿಂದ ಮನೆ ನಿರ್ಮಾಣ, ಭೂಮಿ ಪೂಜೆ


ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ವತಿಯಿಂದ ವಸತಿ ಯೋಜನೆಯಡಿ ಕಾಟಿಪಳ್ಳ – ಕೃಷ್ಣಾಪುರ ಗ್ರಾಮದ ನಿವಾಸಿ ಸೂರಜ್ ಶೆಟ್ಟಿ ಅವರಿಗೆ ಕಟ್ಟಿ ಕೊಡಲಾಗುವ ಮನೆಗೆ ಭೂಮಿ ಪೂಜೆ ನೆರವೇರಿಸಲಾಯಿತು.


ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಭೂಮಿ ಪೂಜೆ ನೆರವೇರಿಸಿದರು. ಸುರತ್ಕಲ್ ಬಂಟರ ಸಂಘದಿಂದ ಈಗಾಗಲೇ ಐದಾರು ಮನೆಗಳನ್ನು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಕಟ್ಟಿಕೊಡಲಾಗಿದೆ. ಸಮಾಜ ಬಾಂಧವರು ಮತ್ತು ದಾನಿಗಳು ನೆರವಿನ ಸಹಕಾರ ನೀಡಿದಾಗ ಇಂತಹ ಸಮಾಜ‌ಮುಖಿ ಕೆಲಸ ಕಾರ್ಯಗಳನ್ನು ನೆರವೇರಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದರು.


ಸಂಘದ ನಿಕಟಪೂರ್ವ ಅಧ್ಯಕ್ಷ ಸುಧಾಕರ ಪೂಂಜ, ವಸತಿ ಸಮಿತಿಯ ಸಂಚಾಲಕ ದೇವೇಂದ್ರ ಶೆಟ್ಟಿ, ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ಮಾಜೀ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀಕಾಂತ್ ಶೆಟ್ಟಿ ಬಾಳ, ಪುಷ್ಪರಾಜ ಶೆಟ್ಟಿ ಮದ್ಯ, ಮಹಿಳಾ ವೇದಿಕೆಯ ಅಧ್ಯೆಕ್ಷೆ ಭವ್ಯಾ ಶೆಟ್ಟಿ, ಕಾರ್ಪೋರೇಟರ್ ಲಕ್ಷ್ಮೀ ದೇವಾಡಿಗ, ನಿರ್ದೇಶಕರಾದ ಸುಜಾತ ಶೆಟ್ಟಿ, ಜಯಂತಿ ಟಿ ರೈ, ಸುಧಾಕರ ಶೆಟ್ಟಿ, ಯಶವಂತ ಶೆಟ್ಟಿ, ನೂತನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!