ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ವತಿಯಿಂದ ವಸತಿ ಯೋಜನೆಯಡಿ ಕಾಟಿಪಳ್ಳ – ಕೃಷ್ಣಾಪುರ ಗ್ರಾಮದ ನಿವಾಸಿ ಸೂರಜ್ ಶೆಟ್ಟಿ ಅವರಿಗೆ ಕಟ್ಟಿ ಕೊಡಲಾಗುವ ಮನೆಗೆ ಭೂಮಿ ಪೂಜೆ ನೆರವೇರಿಸಲಾಯಿತು.
ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಭೂಮಿ ಪೂಜೆ ನೆರವೇರಿಸಿದರು. ಸುರತ್ಕಲ್ ಬಂಟರ ಸಂಘದಿಂದ ಈಗಾಗಲೇ ಐದಾರು ಮನೆಗಳನ್ನು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಕಟ್ಟಿಕೊಡಲಾಗಿದೆ. ಸಮಾಜ ಬಾಂಧವರು ಮತ್ತು ದಾನಿಗಳು ನೆರವಿನ ಸಹಕಾರ ನೀಡಿದಾಗ ಇಂತಹ ಸಮಾಜಮುಖಿ ಕೆಲಸ ಕಾರ್ಯಗಳನ್ನು ನೆರವೇರಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದರು.
ಸಂಘದ ನಿಕಟಪೂರ್ವ ಅಧ್ಯಕ್ಷ ಸುಧಾಕರ ಪೂಂಜ, ವಸತಿ ಸಮಿತಿಯ ಸಂಚಾಲಕ ದೇವೇಂದ್ರ ಶೆಟ್ಟಿ, ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ಮಾಜೀ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀಕಾಂತ್ ಶೆಟ್ಟಿ ಬಾಳ, ಪುಷ್ಪರಾಜ ಶೆಟ್ಟಿ ಮದ್ಯ, ಮಹಿಳಾ ವೇದಿಕೆಯ ಅಧ್ಯೆಕ್ಷೆ ಭವ್ಯಾ ಶೆಟ್ಟಿ, ಕಾರ್ಪೋರೇಟರ್ ಲಕ್ಷ್ಮೀ ದೇವಾಡಿಗ, ನಿರ್ದೇಶಕರಾದ ಸುಜಾತ ಶೆಟ್ಟಿ, ಜಯಂತಿ ಟಿ ರೈ, ಸುಧಾಕರ ಶೆಟ್ಟಿ, ಯಶವಂತ ಶೆಟ್ಟಿ, ನೂತನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…